28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ CET, NEET, JEE, CA ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಹಾಗೂ ಆ ಪರೀಕ್ಷೆಗಳಿಗೆ ಪರಿಣಾಮಕಾರಿಯಾಗಿ ಸಿದ್ಧರಾಗಲು ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಶೈಕ್ಷಣಿಕ ವರ್ಷದಲ್ಲಿ “ಫೌಂಡೇಶನ್ ಎಡ್ಜ್” ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಇದರ ಉದ್ಘಾಟನಾ ಸಮಾರಂಭವು ಜೂ.10 ರಂದು ಅನುಗ್ರಹ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಂ| ಫಾ. ಡಾ. ವಿಜಯ್ ಲೋಬೊ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಕುರಿತು ಸಮಗ್ರ ಮಾಹಿತಿಯನ್ನು ನೀಡಲು ಸಂಪನ್ಮೂಲ ವ್ಯಕ್ತಿಯಾಗಿ ವಿವೇಕ್ ಭಂಡಾರಿ, ಸಹಾಯಕ ನಿರ್ದೇಶಕರು, ನಿಟ್ಟೆ ವಿಶ್ವವಿದ್ಯಾನಿಲಯ, ಉಪಸ್ಥಿತರಿದ್ದರು.
ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಫಾ. ಡಾ. ವಿಜಯ್ ಲೋಬೊ ಅವರು “ಫೌಂಡೇಶನ್ ಎಡ್ಜ್” ಕಾರ್ಯಕ್ರಮದ ಮೂಲ ಉದ್ದೇಶಗಳನ್ನು ವಿವರಿಸಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸ್ಪಷ್ಟ ಅರಿವು ಮತ್ತು ಸೂಕ್ತ ತಯಾರಿಯನ್ನು ಹೊಂದುವುದು ಅಗತ್ಯವೆಂದು ಅವರು ಅಭಿಪ್ರಾಯಪಟ್ಟರು.

ಬಳಿಕ ಸಂಪನ್ಮೂಲ ವ್ಯಕ್ತಿಗಳಾದ ವಿವೇಕ್ ಭಂಡಾರಿ ಅವರು CET, NEET, JEE ,CA ಮೊದಲಾದ ಪರೀಕ್ಷೆಗಳ ಸ್ವರೂಪ, ಅಧ್ಯಯನ ವಿಧಾನಗಳು, ಸಮಯ ನಿರ್ವಹಣೆ, ಗುರಿ ಸಾಧನೆಗೆ ಅಗತ್ಯವಾದ ತಯಾರಿ ಹಾಗೂ ಯಶಸ್ಸಿನ ಸೂತ್ರಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮ ಸಂದೇಹಗಳನ್ನು ಪ್ರಶ್ನೆಗಳ ಮೂಲಕ ವ್ಯಕ್ತಪಡಿಸಿದರು. ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸಮರ್ಪಕ ಹಾಗೂ ಸ್ಪಷ್ಟ ಉತ್ತರಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಮತಿ ಮೇರಿ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಶ್ರೀಮತಿ ವಿನಯಲತಾ ಕಾರ್ಯಕ್ರಮವನ್ನು ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿ, ವಂದನಾರ್ಪಣೆ ಸಲ್ಲಿಸಿದರು.

Related posts

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಲಾಯಿಲ ಅಂಬೇಡ್ಕರ್ ಭವನ ದುರಸ್ತಿಗೆ ಪರಿಶಿಷ್ಟ ಜಾತಿ, ಪಂಗಡಗಳ ಸಭೆಯಲ್ಲಿ ಚರ್ಚೆ, ಅಧಿಕಾರಿಗಳ ತಂಡ ಪರಿಶೀಲನೆ

Suddi Udaya
error: Content is protected !!