26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

ಅಳದಂಗಡಿ: ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ ಹಾಗೂ ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರವು ಜೂ.14ರಂದು ಬೆಳಗ್ಗೆ 10.30ಕ್ಕೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವಠಾರದಲ್ಲಿ ಜರಗಲಿರುವುದು ಎಂದು ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ಕಾರ್ಯಕ್ರಮದ ಉದ್ಘಾಟಣೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ನೆರವೇರಿಸಲಿರುವರು. ಭಾರತೀಯ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಲಿರುವರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಅಧ್ಯಕ್ಷತೆಯನ್ನು ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ, ನಾರಾಯಣ ದೇವಾಡಿಗ ದುಬೈ, ಧಾರ್ಮಿಕ ಪರಿಷತ್ ಸದಸ್ಯ ಮಲ್ಲಿಕಾ ಪ್ರಸಾದ್, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ಭಾಗವಹಿಸಲಿರುವರು.

ಸನ್ಮಾನ ರ‍್ಯಾಂಕ್ ವಿಜೇತರಿಗೆ ಪ್ರತಿಭಾ ಪುರಸ್ಕಾರ: ನಿವೃತ್ತ ಸೈನಿಕರಾದ ಎಸಿಪಿ ನಾಯಕ್ ಸುಬೇದಾರ ಎನ್‌ಪಿ ತಂಗಚ್ಚನ್, ರೂಬಿನ್ ಜೋಸೆಫ್ ರವರನ್ನು ಸನ್ಮಾನಿಸಲಾಗುವುದು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಯಾನಾ ಪೊನ್ನಮ್ಮ, ಅಕ್ಷಯ್ ಎ., ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ಸಮೀಕ್ಷಾ ಅಳದಂಗಡಿ, ಎಸ್‌ಎಸ್‌ಎಲ್‌ಸಿ ವಿಭಾಗದಲ್ಲಿ ಬೆಳ್ತಂಗಡಿ ಸೈಂಟ್ ಮೇರಿ ಹೈಸ್ಕೂಲ್ ವಿದ್ಯಾರ್ಥಿ ಚಿರಾಗ್ ನಾಯಕ್, ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ಗುಡಿಗಾರ್, ಧರ್ಮಸ್ಥಳ ಎಸ್‌ಡಿಎಮ್ ಆಂಗ್ಲ ಮಾಧ್ಯಮ ಶಾಲೆಯ ಮಾಧುರ್ಯ, ಬೆಳ್ತಂಗಡಿ ವಾಣಿ ಪಿಯು ಕಾಲೇಜಿನ ಪ್ರಾಪ್ತಿ ಎಮ್. ಗೌಡ, ಅಳದಂಗಡಿ ಸರಕಾರಿ ಪ್ರೌಢಶಾಲಾ ಕಾವ್ಯ ರವರನ್ನು ಪುರಸ್ಕರಿಸಲಾಗುವುದು.

Related posts

ದೇಲಂಪುರಿ ಶ್ರೀ ಮಹಾಗಪತಿ ದೇವಸ್ಥಾನಕ್ಕೆ ವೀರಮ್ಮ ಸಂಜೀವ ಸಾಲಿಯಾನ್ ರವರಿಂದ ಮರದ ಕುರ್ಚಿ ಕೊಡುಗೆ

Suddi Udaya

ಅರಸಿನಮಕ್ಕಿ: ಕುಡಿಯುವ ನೀರಿನ ಸ್ಥಾವರ ಉದ್ಘಾಟನೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya
error: Content is protected !!