21.7 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ: ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಸಂಕಲ್ಪ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ, ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಬೆಳ್ತಂಗಡಿ ಸಾಮಾಜಿಕ ಅರಣ್ಯ ಇಲಾಖೆಯ ಆರ್.ಎಫ್.ಒ. ಲೋಕೇಶ್ ಎಸ್.ಎನ್. ಅವರ ಮಾರ್ಗದರ್ಶನದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು.

ಕಾರ್ಯಕ್ರಮದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪಿ.ಕುಶಾಲಪ್ಪ ಗೌಡ, ಗೌರವಾಧ್ಯಕ್ಷರಾದ ಎಚ್. ಪದ್ಮಗೌಡ, ಉಪಾಧ್ಯಕ್ಷರಾದ ನಾರಾಯಣ ಗೌಡ ದೆವಸ್ಯ, ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ, ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಕೆ.ಎಂ., ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರುಗಳು ಮತ್ತು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರದ ಲಕ್ಷ್ಮೀನಾರಾಯಣ ಕೆ ಹಾಗೂ ಆಡಳಿತಾಧಿಕಾರಿಗಳಾದ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.

ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ವಾಣಿ ಶಿಕ್ಷಣ ಸಂಸ್ಥೆ ಕೈಜೋಡಿಸಿದ್ದು, ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ದಿನೇಶ್ ಗೌಡ ಯು., ಸಹ ಕಾರ್ಯಕ್ರಮ ಅಧಿಕಾರಿ ಶ್ರಾವ್ಯ ಎಸ್., ರೋವರ್ಸ್ ಮತ್ತು ರೇಂಜರ್ಸ್ ಘಟಕದ RSL ಬೆಳಿಯಪ್ಪ ಕೆ. ಹಾಗೂ RL ರಕ್ಷಾ, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಹಾಗೂ ಇತರ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

“ಒಂದು ಗಿಡ – ಒಂದು ಜೀವ” ಎಂಬ ಸಂದೇಶದೊಂದಿಗೆ ನಡೆದ ಈ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡುವಲ್ಲಿ ಯಶಸ್ವಿಯಾಯಿತು.

Related posts

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!