July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ವಿವರಿಸಿ ಮನವಿ : ಬುರುಡೆ ಕೇಸ್ ಚಾರ್ಜ್‌ಶೀಟ್‌ಗೆ ಚಿನ್ನಯ್ಯ ಅರ್ಜಿ

ಬೆಳ್ತಂಗಡಿ: ಬಡತನದ ದುಸ್ಥಿತಿಯಲ್ಲಿದ್ದ ತನಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿ ಕುಟುಂಬದ ವಿರುದ್ಧ ಸುಳ್ಳು ಸಾಕ್ಷಿ ಹೇಳಿಸಿ ಷಡ್ಯಂತ್ರ ರೂಪಿಸಲಾಗಿತ್ತು. ಈ ಷಡ್ಯಂತ್ರದ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದು ಚಾರ್ಜ್‌ಶೀಟ್ ಸಲ್ಲಿಸಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿಗೆ) ನಿರ್ದೇಶನ ನೀಡಬೇಕು ಎಂದು ಕೋರಿ ಪ್ರಕರಣದ ಪ್ರಮುಖ ಆರೋಪಿ ಚಿನ್ನ ಸಿ.ಎನ್. ಅಲಿಯಾಸ್ ಚಿನ್ನಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಜೂ.11ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಸರ್ಕಾರ, ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿದ್ದು, ಮುಂದಿನ ವಿಚಾರಣೆಯನ್ನು ಜೂ.29ಕ್ಕೆ ನಿಗದಿಪಡಿಸಿದೆ. ಪ್ರಕರಣದಲ್ಲಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಪಾಂಗಳದ ವಿಠಲ್ ಗೌಡ, ಜಯಂತ್, ಎಂ.ಡಿ.ಸಮೀರ್, ಸುಜಾತ ಭಟ್ ಯೂಟ್ಯೂಬರ್‌ಗಳಾದ ಅಜಯ್ ಅಂಚನ್, ದಿನೇಶ್ ಮತ್ತಿತರರು ಸಂಚಿನ ಭಾಗವಾಗಿದ್ದಾರೆ. ಸುಪ್ರೀಂಕೋರ್ಟ್ ವಕೀಲ ಕೆ.ವಿ. ಧನಂಜಯ ಅವರ ಕಚೇರಿ ಮತ್ತು ದೆಹಲಿಯ ಲಾಡ್ಜ್ ವೊಂದರಲ್ಲಿ ನ್ಯಾಯಾಲಯಗಳ ಮುಂದೆ ಸುಳ್ಳು ಹೇಳಿಕೆಗಳನ್ನು ನೀಡಲು ತನಗೆ ಬೆದರಿಕೆ ಹೊಡ್ಡಿ ತರಬೇತಿ ನೀಡಲಾಗಿದ್ದು ಕ್ಷೇತ್ರದ ಪ್ರಾವಿತ್ಯತೆಗೆ ದಕ್ಕೆ ತರಲು ಮತ್ತು ವೀರೇಂದ್ರ ಹೆಗ್ಗಡೆಯವರನ್ನು ಜೈಲುವಿಗೆ ಕಳುಹಿಸಲು ರೂ. 200 ಕೋಟಿ ಬಜೆಟ್ ನಲ್ಲಿ ಯೋಜನೆ ರೂಪಿಸಲಾಗಿದ್ದು ಎಂದು ಅರ್ಜಿ ಯಲ್ಲಿ ವಿವರಿಸಲಾಗಿದೆ.

Related posts

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಲ. ನಿತ್ಯಾನಂದ ನಾವರ ನೇಮಕ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya
error: Content is protected !!