July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ: ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಬೆಳ್ತಂಗಡಿ ಜನಜಾಗೃತಿ ಪ್ರಾದೇಶಿಕ ವಿಭಾಗ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಇವರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ ಜೂ. 12ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ವಹಿಸಿ, ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ವಿರಾಜಪೇಟೆ ಶ್ರೀ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಆಶೀರ್ವಚನ ನೀಡಿದರು.

ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವೀ.ಹೆಗ್ಗಡೆ ರವರು ವಾರ್ಷಿಕ ವರದಿ ಬಿಡುಗಡೆ ಮಾಡಿದರು. ಎಂಎಲ್ ಸಿ ಪ್ರತಾಪ ಸಿಂಹ ನಾಯಕ್ ನವಜೀವನ ಪ್ರಶಸ್ತಿ ಪ್ರದಾನ ಮಾಡಿದರು. ಬೆಂಗಳೂರು ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್ ನವಜೀವನ ಕಿರುಚಿತ್ರ ಹಸ್ತಾಂತರವನ್ನು ನೆರವೇರಿಸಿದರು. ಯೋಜನೆಯ ಸಿಇಒ ಅನಿಲ್ ಕುಮಾರ್ ಎಸ್. ಎಸ್. ಆಶಯ ನುಡಿಗಳನ್ನಾಡಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲ್ಯಾನ್, ಟ್ರಸ್ಟ್ ನ ಟ್ರಸ್ಟಿ ವಿ. ರಾಮಸ್ವಾಮಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ ಕಾರಂತ್, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಗಿರೀಶ್ ಕೆ.ಎಸ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ , ಹಣಕಾಸು ವಿಭಾಗದ ನಿರ್ದೇಶಕ ಶಾಂತಾರಾಂ ಪೈ, ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯಸ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮೂರು ಮಂದಿಗೆ ‘ಜಾಗೃತಿ‌ ಅಣ್ಣ’ ಮತ್ತು ಆರು ಮಂದಿ ಗೆ ‘ಜಾಗೃತಿ ಮಿತ್ರ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಚೇರಿ ಸಿಬ್ಬಂದಿಗಳಾದ ಸುಮಂಗಳಾ, ಪ್ರೀತಿ, ಮಧುಶ್ರೀ ಇವರ ಪ್ರಾಥ೯ನೆ ಬಳಿಕ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯಿಸ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಯೋಜನಾಧಿಕಾರಿ ಗಣೇಶ್ ಆಚಾರ್ಯ ನಿರೂಪಿಸಿದರು. ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

Suddi Udaya

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya
error: Content is protected !!