26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಾಳೆ(ಜೂ.13): ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಯಶೋ-ವಿಜಯ ಬದುಕು-ನೆನಪು-ಸ್ಮರಣೆ, ಹಾಗೂ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರ ಶುಭಾರ್ಶಿವಾದಗಳೊಂದಿಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಿರ್ವೆರ್ ಕುಡ್ಲ ಮಂಗಳೂರು ಇದರ ನೇತೃತ್ವದಲ್ಲಿ ಯಶೋ ವಿಜಯ ಬದುಕು-ನೆನಪು-ಸ್ಮರಣೆ ಹಾಗೂ ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣಾ ಕಾರ್ಯಕ್ರಮವು ನಾಳೆ (ಜೂ.13) ರಂದು ಪೂರ್ವಾಹ್ನ 10ಕ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯಲ್ಲಿ ಜರುಗಲಿರುವುದು ಎಂದು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಸಂಚಾಲಕ,ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರು ನೆರವೇರಿಸಲಿರುವರು.ಪ್ರಸಿದ್ದ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಫ್ರೆಂಡ್ಸ್ ಬಳ್ಳಾಲ್‌ ಬಾಗ್ ಬಿರುವೆರ್ ಕುಡ್ಲ ಇದರ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿ, ರೊ| ಬಿ.ಕೆ. ಧನಂಜಯ ರಾವ್, ನ್ಯಾಯವಾದಿಗಳು, ಬೆಳ್ತಂಗಡಿ, ರೊ। ಶ್ರೀಧರ್ ಕೆ.ವಿ., ಸುರಕ್ಷಾ ಮೆಡಿಕಲ್ ಉಜಿರೆ, ತುಕರಾಂ ಬಿ., ಅಧ್ಯಕ್ಷರು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ತಂಗಡಿ, ಸುರೇಶ್ ಶೆಟ್ಟಿ ಲ್ಯಾಲ, ಅಧ್ಯಕ್ಷರು ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ, ಪೂರಣ್ ವರ್ಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಐ.ಟಿ ಮತ್ತು ವಸತಿ ನಿಲಯಗಳ ಆಡಳಿತ ವಿಭಾಗ ಎಸ್.ಡಿ.ಎಂ.ಇ. ಉಜಿರೆ, ರಾಜೇಶ್ ಶೆಟ್ಟಿ ನವಶಕ್ತಿ, ಉದ್ಯಮಿಗಳು, ಗುರುವಾಯನಕೆರೆ, ಶ್ರೀಮತಿ ಸುಚಿತಾ ರಾಜೇಶ್ ಶೆಟ್ಟಿ, ನವಶಕ್ತಿ, ಗುರುವಾಯನಕೆರೆ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya
error: Content is protected !!