26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಸಪ್ತಾಹದ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಕಾಲೇಜ್ ಆಫ್ ನ್ಯಾಚುರೋಪತಿ & ಯೋಗಿಕ್ ಸೈನ್ಸಸ್ ಧರ್ಮಸ್ಥಳ ಇಲ್ಲಿನ ವೈದ್ಯಾಧಿಕಾರಿಗಳಾಗಿರುವ ಡಾ. ಬಿಂದುಶ್ರೀ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ಯೋಗದ ಇತಿಹಾಸ ಪ್ರಸ್ತುತ ದಿನಗಳಲ್ಲಿ ಯೋಗ ಯಾವ ರೀತಿ ಕೆಲಸ ಮಾಡುತ್ತಿದೆ ಮಾನಸಿಕ ನೆಮ್ಮದಿಗೆ ಯೋಗ ಹಾಗೂ ಆಸನಗಳ ಮಹತ್ವ ಇತ್ಯಾದಿಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಕ್ಲಿನಿಕಲ್ ಯೋಗದಲ್ಲಿ ಎಂ.ಡಿ ಅಂತಿಮ ವರ್ಷದ ವಿದ್ಯಾರ್ಥಿನಿ ಡಾ. ಅಕ್ಷತಾ, ಯು.ಜಿ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕು. ಅಕ್ಷಯಾ, ಹಾಗೂ ವಸಂತಕುಮಾರ್ ಉಪಸ್ಥಿತರಿದ್ದು ಸಹಕರಿಸಿದರು. ಶಾಲಾ ಮುಖೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿ ಬಂದ ಈ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿನಿಕುಮಾರಿ ಅನುಜ್ಞ ನಿರ್ವಹಿಸಿದರು.

Related posts

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ವೇಣೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98 ಫಲಿತಾಂಶ

Suddi Udaya
error: Content is protected !!