28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಭೂಮಿಯ ತೇವಾಂಶ ಹೆಚ್ಚಾದ ಪರಿಣಾಮ ಬಂಡೆಯೊಂದು ಕುಸಿದ ಘಟನೆ ನಡೆದಿದೆ.

ಕಳೆದ ಒಂದು ತಿಂಗಳಿಂದ ನಿರಂತರವಾಗಿ ಸಾಧಾರಣ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಘಾಟಿ ಪ್ರದೇಶದಲ್ಲಿ ಭೂಮಿಯ ತೇವಾಂಶ ಹೆಚ್ಚಾಗಿದ್ದು ಇದೇ ಕಾರಣದಿಂದ ಬಂಡೆ ಕುಸಿದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಬಂಡೆ ಕುಸಿತ ಸಂಭವಿಸಿದರೂ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವಾಹನ ಸಂಚಾರಕ್ಕೂ ಯಾವುದೇ ತೊಂದರೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಲೆನಾಡಿನ ವಿವಿಧ ಭಾಗಗಳಲ್ಲಿ ಆಗಾಗ ಸಾಧಾರಣ ಮಳೆಯಾಗುತ್ತಿದ್ದು, ಘಾಟಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

Related posts

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!