25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಹಿತಿ ಮತ್ತು ಸಂವಹನ ಕಾರ್ಯಾಗಾರ

ಧರ್ಮಸ್ಥಳ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯಿತಿ ಬೆಳ್ತಂಗಡಿ, ಮಹಾತ್ಮ ಗಾಂಧಿ ಧರ್ಮಸ್ಥಳ ಗ್ರಾಮ ಪಂಚಾಯತು, ಸ್ವಚ್ಛ ಭಾರತ್ ಮಿಷನ್ ದಕ್ಷಿಣ ಕನ್ನಡ, ಮಾನ್ವಿ ಶ್ರೀ ಸಂಜೀವಿನಿ ಒಕ್ಕೂಟ ಧರ್ಮಸ್ಥಳ, ಇವರ ಸಹಯೋಗದಲ್ಲಿ ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಹಿತಿ ಮತ್ತು ಸಂವಹನ ಕಾರ್ಯಾಗಾರ ಧರ್ಮಸ್ಥಳ ಗ್ರಾಮ್ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯತಿ ಆಡಳಿತ ಅಧಿಕಾರಿ ಮಹಾವೀರ ಸೇಬಣ್ಣನವರ ಅಧ್ಯಕ್ಷತೆಯಲ್ಲಿ ನಡೆಯಿತು

ಕಾರ್ಯಗಾರವನ್ನು ತಾಲೂಕು ಪಂಚಾಯತ್ ಬೆಳ್ತಂಗಡಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ರವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟನೆಯನ್ನು ಮಾಡಿದರು. ತ್ಯಾಜ್ಯ ನಿರ್ವಹಣೆ ಸಂಪನ್ಮೂಲ ಕ್ರೂಡೀಕರಣ, ಯಾವ ರೀತಿ ತ್ಯಾಜ್ಯ ನಿರ್ವಹಣೆ ಮತ್ತು ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಮಗ್ರವಾದ ಮಾರ್ಗದರ್ಶನವನ್ನು ನೀಡಿದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಸ್ವಾಗತ ಹಾಗೂ ಪ್ರಸ್ತಾವನೆಯ ಮೂಲಕ ಮಾತಾಡಿ ಮೂಲದಿಂದಲೇ ತ್ಯಾಜ್ಯ ನಿರ್ವಹಣೆ, ತ್ಯಾಜ್ಯ ಸಂಗ್ರಹಣೆಯ ವೇಳಾಪಟ್ಟಿ, ತ್ಯಾಜ್ಯ ನಿರ್ವಹಣೆಯ ಬಗ್ಗೆ ಶುಲ್ಕ ವಿಧಿಸುವ ಬಗ್ಗೆ , ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಪರಿಣಾಮಕಾರಿ ಅನುಷ್ಠಾನವಾಗುವ ಬಗ್ಗೆ ತಿಳಿಸಿದರು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಸ್ NGO ಸಂಸ್ಥೆಸಂಯೋಜಕರು ಅನಂತ ದೇಶ ಭಂಡಾರಿ, ಸಾಹಸ್ NGO ಸಂಸ್ಥೆಯ ಮೇಲ್ವಿಚಾರಕರು ಗಣೇಶ್ ಕೆ ಆರ್., ಮಂಗಳೂರು ಜಿಲ್ಲಾ ಪಂಚಾಯತ್ ಜಿಲ್ಲಾ ಸ್ವಚ್ಛತಾ ಸಮಾಲೋಚಕರು ಡೊಂಬಯ್ಯ ಇವರು ಗ್ರಾಮದ ಸ್ವಚ್ಛತೆ, ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ನಿರಂತರತೆಯ ಸುಸ್ಥಿರತೆಯನ್ನು ಕಾಪಾಡುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದ ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ಮಹಾವೀರಸೇಬಣ್ಣನವರು ಮಾತನಾಡಿ ಗ್ರಾಮದ ಅಭಿವೃದ್ಧಿಯ ಜೊತೆಗೆ ಗ್ರಾಮದ ಸ್ವಚ್ಛತೆ, ಏಕ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಸಾರ್ವಜನಿಕರು, ಅಂಗಡಿ ಹೋಟೆಲ್ ಮಾಲಕರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಹಕರಿಸುವಂತೆ ವಿನಂತಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು, ಸಂಘ ಸಂಸ್ಥೆ ಪ್ರತಿನಿಧಿಗಳು, ಅಂಗಡಿ, ಹೋಟೆಲ್ ಮಾಲಕರು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರುಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಮೀಳಾ ಧನ್ಯವಾದ ಸಲ್ಲಿಸಿದರು, ದೇವಿಪ್ರಸಾದ್ ಬೊಲ್ಮ ಕಾರ್ಯಕ್ರಮ ನಿರ್ವಹಿಸಿದರು.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ವೇಣೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು ಕೊರತೆಗಳ ವಿಶೇಷ ಗ್ರಾಮ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!