26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಾಲಕಾರ್ಮಿಕ ಪದ್ಧತಿ ಸಮಾಜದ ಮೇಲೆ ಉಂಟುಮಾಡುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಮಕ್ಕಳನ್ನು ದುಡಿಮೆಗೆ ತಳ್ಳುವ ಬದಲು ಅವರಿಗೆ ಗುಣಮಟ್ಟದ ಶಿಕ್ಷಣ, ಸುರಕ್ಷಿತ ವಾತಾವರಣ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಅವಕಾಶಗಳನ್ನು ಒದಗಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ತಿಳಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬಂಧಿಸಿದ ಪ್ರಮಾಣವಚನ ಸ್ವೀಕರಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ.ಆರ್. ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಿಕ್ಷಕಿ ಸೌಮ್ಯ ನೀತಾ ಕೆ ಎಸ್ ಶ್ರೇಯಾಂಸ ಜೈನ್ , ಅಮಿತಾ ಪ್ರವೀಣ್ ,ಸಹನಾ ಶಾಲೆಯ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದರು.

Related posts

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya
error: Content is protected !!