26.2 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ

ಉಜಿರೆ : “ವಿದ್ಯಾರ್ಥಿಯ ಬದುಕಿನಲ್ಲಿ ವಿದ್ಯೆಯ ಜೊತೆಗೆ ಸಂಸ್ಕಾರವು ಇದ್ದಾಗ ಮಾತ್ರ ಪರಿಪೂರ್ಣ ವಿದ್ಯಾರ್ಥಿಯಾಗುತ್ತಾನೆ” ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಮಹಾವೀರ್ ಜೈನ್ ಎಂದು ಪೋಷಕರ ಜವಾಬ್ದಾರಿಗಳ ಕುರಿತು ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಜೂ.13 ರಂದು ನಡೆದ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ 2026-27ನೇ ಶೈಕ್ಷಣಿಕ ಸಾಲಿನ 6 ರಿಂದ 8ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕ ಜಾರ್ಜ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಬಾರ್ಯ: ಮುರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1.50 ಲಕ್ಷ ಡಿಡಿ ವಿತರಣೆ

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!