September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ನಾವೂರು: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ರಚನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಶಾಲಾ ಶಿಕ್ಷಕರು ಚುನಾವಣಾ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು. ಫಾತಿಮತ್ ಮುಫೀದ 7ನೇ ತರಗತಿ ಮುಖ್ಯ ಮಂತ್ರಿಯಾಗಿ, ಜೋಶಿಲ್ ಶಾಜು 6ನೇ ತರಗತಿ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ವಿವಿಧ ಸಚಿವರಾಗಿ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಚುನಾವಣಾ ಮಾರ್ಗದರ್ಶಿ ಶಿಕ್ಷಕಿ ಶ್ರೀಲತಾ ಸಿ ಎಚ್ ಅವರು ಪ್ರಮಾಣ ವಚನ ಬೋಧಿಸಿ, ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ತಿಳಿಸಿದರು. ವಿದ್ಯಾರ್ಥಿ ನಾಯಕರು ಶಾಲೆಯ ಶಿಸ್ತು, ಸ್ವಚ್ಛತೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಿ ಪ್ರತಿಜ್ಞೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕರಾದ ಶ್ರೀಮತಿ ರೋಹಿಣಿ ಕೆ ಅವರು ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಗಳು, ಜವಾಬ್ದಾರಿಗಳು ಹಾಗೂ ಸೇವಾ ಮನೋಭಾವದ ಕುರಿತು ಮಾರ್ಗದರ್ಶನ ನೀಡಿದರು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ 10 ದಿನಗಳವರೆಗೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!