September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆ ವತಿಯಿಂದ 2025-26ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ “ವಾಣಿ ವಿದ್ಯಾ ಪುರಸ್ಕಾರ-2026” ಕಾರ್ಯಕ್ರಮವು ಜೂ.13 ರಂದು ಸಂಸ್ಥೆಯ ಆಡಿಟೋರಿಯಂನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿದರು. ವಾಣಿ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಪದ್ಮ ಗೌಡ ಪ್ರಾಸ್ತಾವಿಕ ಮಾತನಾಡಿದರು.

ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಶಾಸಕ ಭೋಜೆ ಗೌಡ, ಶಾಸಕ ಹರೀಶ್ ಪೂಂಜ, ಆಡಳಿತ ಮಂಡಳಿ ನಿರ್ದೇಶಕ ಜಯಾನಂದ ಗೌಡ ಪ್ರಜ್ವಲ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಬಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿಜೇತ್ ಹಾಗೂ ರಂಜಿತ್ ರವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಧರ್ಣಪ್ಪ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಜತೆ ಕಾರ್ಯದರ್ಶಿ ಕೆ.ಎಂ. ಶ್ರೀನಾಥ್, ಕೋಶಾಧಿಕಾರಿ ಯುವರಾಜ್ ಅನಾರ್, ನಿಕಟಪೂರ್ವ ಅಧ್ಯಕ್ಷ ಸೋಮೇಗೌಡ ಲಾಯಿಲ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ, ನಿರ್ದೇಶಕರಾದ ಬಾಲಕೃಷ್ಣ ಗೌಡ ಬಿರ್ಮೊಟ್ಟು, ವಿಜಯ ಕುಮಾರ್ ನ್ಯಾಯತರ್ಪು, ಉಷಾದೇವಿ ಉಜಿರೆ, ಭವಾನಿ ಕೆ ಗೌಡ, ಡಿ.ಎಂ ಗೌಡ ಉಜಿರೆ, ಎನ್ ಪ್ರಸನ್ನ ಗೌಡ, ಮಾಧವ ಗೌಡ, ದಿನೇಶ್ ಗೌಡ ಕೊಯ್ಯೂರು, ವಸಂತ ನಡ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ವಾಣಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ಲಕ್ಷ್ಮೀ ನಾರಾಯಣ ಕೆ ಧನ್ಯವಾದವಿತ್ತರು. ಕನ್ನಡ ಉಪನ್ಯಾಸಕ ಬೆಳ್ಳಿಯಪ್ಪ ಕೆ ಗೌಡ ಮತ್ತು ಸಂಧ್ಯಾ ನಿರೂಪಿಸಿದರು.

Related posts

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಸುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ ಕಾರ್ಯಕ್ರಮ

Suddi Udaya
error: Content is protected !!