26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಮದ್ರಾಸ್, ವಾರಣಾಸಿಯ ಐಐಟಿಗೆ ಪ್ರವೇಶ

ಮೂಡುಬಿದಿರೆ: ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್-2026ರ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ.

ವಿದ್ಯಾರ್ಥಿ ಧನುಷ್ ಗುತ್ತಿ ಅವರು ಅಖಿಲ ಭಾರತ ಮಟ್ಟದ ಕೆಟಗರಿ ವಿಭಾಗದಲ್ಲಿ 95ನೇ ರ‍್ಯಾಂಕ್ ಪಡೆದು ಪ್ರತಿಷ್ಠಿತ ಐಐಟಿ ಮದ್ರಾಸ್‌ನ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರವೇಶ ಪಡೆದಿದ್ದಾರೆ. ಈ ಹಿಂದೆ ನಡೆದ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಯಲ್ಲಿ 600 ಅಂಕಗಳಿಗೆ 598 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದ ಅವರು, ಇದೀಗ ಜೆಇಇ ಅಡ್ವಾನ್ಸ್‌ಡ್‌ನಲ್ಲಿಯೂ ಸಾಧನೆ ಮೆರೆದು ಕಾಲೇಜಿನ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯವನ್ನು ಬರೆದಿದ್ದಾರೆ. ಮತ್ತೋರ್ವ ವಿದ್ಯಾರ್ಥಿ ಆದಿತ್ಯ ಅನಿಲ್ ಕೆಂಚಣ್ಣಾವರ್ ಅವರು ಅಖಿಲ ಭಾರತ ಮಟ್ಟದಲ್ಲಿ 1803ನೇ ರ‍್ಯಾಂಕ್ ಗಳಿಸಿ ಐಐಟಿ (ಬಿಹೆಚ್‌ಯು), ವಾರಾಣಸಿಯಲ್ಲಿ ಮ್ಯಾಥಮ್ಯಾಟಿಕ್ಸ್ ಅಂಡ್ ಕಂಪ್ಯೂಟಿಂಗ್ ವಿಭಾಗಕ್ಕೆ ಪ್ರವೇಶ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿ ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ, ಗುಣಮಟ್ಟದ ತರಬೇತಿ ಹಾಗೂ ಬೋಧಕರ ಸಮರ್ಪಿತ ಮಾರ್ಗದರ್ಶನವೇ ಈ ಯಶಸ್ಸಿನ ಹಿಂದಿನ ಪ್ರಮುಖ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Related posts

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!