30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ : “ಶಿಕ್ಷಣವು ಕೇವಲ ಅಂಕ ಗಳಿಸುವ ಸಾಧನವಾಗಿರದೆ, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಮಾಧ್ಯಮವಾಗಬೇಕು” ಎಂದು ‘ಕಲರವ ಮಕ್ಕಳ ಅಭಿವೃದ್ಧಿ ಕೇಂದ್ರ’ದ ಸ್ಥಾಪಕ ನಿರ್ದೇಶಕರು ಡಾ.ಶಿಲ್ಪಾ ಹೆಗ್ಡೆ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆದ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ 2026-27ನೇ ಶೈಕ್ಷಣಿಕ ಸಾಲಿನ 3, ರಿಂದ 5ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಶ್ರೀಮತಿ ನೀತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

Suddi Udaya
error: Content is protected !!