September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಚಂದ್ರಶೇಖ‌ರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಅತ್ಯಂತ ಗಂಭೀರ ಮತ್ತು ಖಂಡನೀಯ ಸಂಗತಿಯಾಗಿದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷೆ ಶಮಾ ಉಜಿರೆ ತಿಳಿಸಿದ್ದಾರೆ.

ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರ ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಸ್ಥಳಗಳಲ್ಲಿ ಮಹಿಳೆಯರಿಗೆ ಕಿರುಕುಳ, ಬೆದರಿಕೆ ಅಥವಾ ಮಾನಸಿಕ ಹಿಂಸೆ ಉಂಟಾಗುವಂತಹ ಘಟನೆಗಳು ನಡೆಯುತ್ತಿರುವುದು ಸಮಾಜದ ತಲೆ ತಗ್ಗಿಸುವ ವಿಷಯವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸಿ, ಸತ್ಯಾಸತ್ಯತೆಗಳನ್ನು ಹೊರತೆಗೆದು ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ, ದೂರು ನೀಡಿದ ಮಹಿಳಾ ಸಿಬ್ಬಂದಿಗೆ ಅಗತ್ಯ ರಕ್ಷಣೆ ಹಾಗೂ ನ್ಯಾಯ ಒದಗಿಸಬೇಕು.

ಈ ಪ್ರಕರಣವು ಮಹಿಳೆಯರ ಕೆಲಸದ ಸ್ಥಳದಲ್ಲಿನ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಆಸ್ಪತ್ರೆ ಆಡಳಿತ ಮತ್ತು ಆರೋಗ್ಯ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಮಾ ಉಜಿರೆ ಆಗ್ರಹಿಸಿದ್ದಾರೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya
error: Content is protected !!