September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

ಕೊಕ್ಕಡ: ಭಾರತೀಯ ಸೇನೆಗೆ ಆಯ್ಕೆಯಾದ ಕೊಕ್ಕಡ ನಿವಾಸಿ ಪ್ರೀತಮ್ ಜೈನ್ ರವರಿಗೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಅಭಿನಂದಿಸಿ ಗೌರವಿಸಲಾಯಿತು.

ಬೆಳ್ತಂಗಡಿಯ ಕೊಕ್ಕಡದ ಎಳ್ನೀರು ನಿವಾಸಿ ಸಂಪತ್ ಕುಮಾರ್ ಹಾಗೂ ಶ್ರೀಮತಿ ಶೋಭಿತ ರವರ ಪುತ್ರ ಪ್ರೀತಮ್ ಜೈನ್ ಇವರು ಭಾರತೀಯ ಸೇನೆಗೆ ಆಯ್ಕೆಯಾಗಿರುವುದು ಸಮಾಜಕ್ಕೆ ಹಾಗೂ ಊರಿಗೆ ಹೆಮ್ಮೆಯ ವಿಷಯವಾಗಿದೆ. ಬಸದಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದು ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರಿಯರಾಗುತ್ತಿದ್ದರು.

ಈ ಸಂದರ್ಭದಲ್ಲಿ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕ್ಷೇತ್ರ ಚಂದ್ರಪುರ ಶಿಶಿಲ ದ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಿ ಶುಭಕೋರಲಾಯಿತು. ಡಾ. ಕೆ. ಜಯಕೀರ್ತಿ ಜೈನ್, ಹೆಚ್. ವಿಜಯ ಕುಮಾರ್ ಜೈನ್, ಫಣಿರಾಜ್ ಜೈನ್, ಪಿ ಅತಶಯ ಜೈನ್, ಪ್ರೀತಮ್ ಜೈನ್, ಸಂಪತ್ ಜೈನ್ ಉಪಸ್ಥಿತರಿದ್ದರು.

Related posts

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya
error: Content is protected !!