September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. ಸಾರ್ವತ್ರಿಕ ಮತದಾನದಲ್ಲಿ ನಡೆಯುವ ಎಲ್ಲಾ ಪ್ರಕ್ರಿಯೆಗಳನ್ನು ಇಲ್ಲಿ ಬಳಸಿ ವಿದ್ಯಾರ್ಥಿಗಳಿಗೆ ಮತದಾನದ ವಿಧಾನಗಳನ್ನು ಪ್ರತ್ಯಕ್ಷವಾಗಿ ತಿಳಿಯಲು ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳು ನಾಮಪತ್ರವನ್ನು ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಇವರಲ್ಲಿ ಸಲ್ಲಿಸಿದ್ದರು.

ಮತದಾನ ಮಾಡಲು ಮತಗಟ್ಟೆಯಲ್ಲಿ ಇವಿಎಂ ಬಳಸಲಾಗಿತ್ತು. ಹಾಗೂ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಗುರುತಿನ ಚೀಟಿಯಾಗಿತ್ತು. ಶಾಲಾ ನಾಯಕನಾಗಿ ಶ್ರೀವರ್ಚಸ್, ಶಾಲಾ ಉಪನಾಯಕನಾಗಿ ಅಮಿತ್, ಶಿಕ್ಷಣ ಮಂತ್ರಿಯಾಗಿ ಸಮರ್ಥ ಭಟ್, ನೀರಾವರಿ ಮಂತ್ರಿಯಾಗಿ ಎನ್ ಭಕ್ತಿ, ಶಿಸ್ತಿನ ಮಂತ್ರಿಯಾಗಿ ತೇಜಸ್ ಎಸ್, ಆಹಾರ ಮತ್ತು ಆರೋಗ್ಯ ಮಂತ್ರಿಯಾಗಿ ಅಲ್ಬಿನಾ ಟಿ. ಎ, ಸಾಂಸ್ಕೃತಿಕ ಮಂತ್ರಿಯಾಗಿ ಅಶ್ವಿತ, ಕ್ರೀಡಾ ಮಂತ್ರಿಯಾಗಿ ಆದ್ಯ ರೈ ಆಯ್ಕೆಯಾದರು. ಶಾಲಾ ಶಿಕ್ಷಕ ವೃಂದ ಮತಗಟ್ಟೆ ತಯಾರಿ ಇವಿಎಂ ಮತಯಂತ್ರದ ಉಸ್ತುವಾರಿಯನ್ನು ವಹಿಸಿದ್ದರು.

Related posts

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದಿಂದ ಆನ್‌ಲೈನ್ ಜಾಗೃತಿ ಕಾರ್ಯಕ್ರಮ; ಕುಂಭಶ್ರೀ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವೀಕ್ಷಣೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!