30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

ಉಜಿರೆ: ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆಯು ಅತ್ಯಂತ ಭಕ್ತಿಭಾವ ಹಾಗೂ ಶ್ರದ್ಧಾಪೂರ್ವಕವಾಗಿ ನೆರವೇರಿತು.

ಈ ಸಂದರ್ಭದಲ್ಲಿ ನಡೆದ ಪವಿತ್ರ ಬಲಿಪೂಜೆಯ ನೇತೃತ್ವವನ್ನು ಬೆದ್ರಬೆಟ್ಟುವಿನ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ವಂದನೀಯ ಫಾ. ಮ್ಯಾಥ್ಯೂ ವಹಿಸಿದ್ದರು.

ತಮ್ಮ ಪ್ರಬೋಧನೆಯಲ್ಲಿ ಅವರು ಸಂತ ಅಂತೋಣಿಯವರ ಜೀವನ, ತ್ಯಾಗ, ಸೇವಾ ಮನೋಭಾವ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಕುರಿತು ವಿವರಿಸಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸತ್ಯನಿಷ್ಠೆ, ಪ್ರೀತಿ, ಕರುಣೆ ಹಾಗೂ ಸೇವಾಭಾವನೆಗಳನ್ನು ಅಳವಡಿಸಿಕೊಳ್ಳಬೇಕೆಂದು ನೈತಿಕ ಸಂದೇಶ ನೀಡಿದರು.

ಬಲಿಪೂಜೆಯಲ್ಲಿ ಅನುಗ್ರಹ ವಿದ್ಯಾಸಂಸ್ಥೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ ವಂದನೀಯ ಫಾ. ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಪ್ರವೀಣ್ ವಿಜಯ್ ಡಿಸೋಜ ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಬಲಿಪೂಜೆಯ ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ನೆರೆದಿದ್ದ ಪಾಲಕರು ಮತ್ತು ಅತಿಥಿಗಳ ಮೆಚ್ಚುಗೆಗೆ ಪಾತ್ರವಾದವು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸ್ನೇಹಲ್ ಅಡ್ಲಿನ್ ಡಿಸೋಜ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Related posts

ಧರ್ಮಸ್ಥಳದಲ್ಲಿ “ನಲಿಯೋಣ ಬಾ” ರಂಗಶಿಬಿರ ಉದ್ಘಾಟನೆ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂoಜರವರಿಗೆ ಪಾರೆoಕಿ ಹಾರಬೆ ಶ್ರೀ ದುಗಲಾಯ ಗುಳಿಗ ನೇಮೋತ್ಸವ ಸಮಿತಿಯಿಂದ ಸನ್ಮಾನ

Suddi Udaya

ಕಕ್ಕಿಂಜೆ ಪ್ರಾಥಮಿಕ ಶಾಲೆಗೆ ನುಗಿದ್ದ ಕಳ್ಳರು

Suddi Udaya
error: Content is protected !!