September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಐಟಿ ಕಚೇರಿಗೆ ಮಟ್ಟಣ್ಣವರ್ ,ಜಯಂತ್ ಟಿ ತಂಡ ಆಗಮನ

ಬೆಳ್ತಂಗಡಿ : ಬುರುಡೆ ಪ್ರಕರಣದ ಚಿನ್ನಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಗಿರೀಶ್ ಮಟ್ಟಣ್ಣವರ್ ,ಜಯಂತ್ ಟಿ ತಂಡ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿ ದೂರು ಅರ್ಜಿ ನೀಡಿದ್ದಾರೆ‌.

ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಜೂ.13 ರಂದು ಭೇಟಿ ನೀಡಿ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಪೊಲೀಸ್ ಭದ್ರತೆ ನೀಡಬೇಕು , ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಮಾಡಬೇಕು, ಹೈಕೋರ್ಟ್ ಗೆ ನೀಡಿದ ಹೇಳಿಕೆಯನ್ನು ಮಾಧ್ಯಮಗಳಿಗೆ ,ಸಾಮಾಜಿಕ ಜಾಲತಾಣಗಳಿಗೆ ಕೊಡಬಾರದು ಎಂಬ ಜಾಮೀನು ಷರತ್ತು ಉಲ್ಲಂಘನೆಯಾಗಿರುತ್ತದೆ. ಹೀಗಾಗಿ SIT ತಂಡದ ನ್ಯಾಯವಾದಿಗಳು ಚಿನ್ನಯ್ಯನ ಅವರ ಜಾಮೀನು ರದ್ದತಿ ಅರ್ಜಿ ಸಲ್ಲಿಸಬೇಕು. ಜೊತೆಗೆ ನೇರಪ್ರಸಾರದ ಮೂಲಕ ನನ್ನ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬೇಕೆಂದು ಮಾಧ್ಯಮಗಳಿಗೆ ಗಿರೀಶ್ ಮಟ್ಟಣ್ಣವರ್ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ,ಜಯಂತ್ ಟಿ ಜೊತೆಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಅನಿಲ್ ಅಂತರ , ಪ್ರಕಾಶ್.ಸಿ ಬೆಂಗಳೂರು, ಮನೋಜ್ ಕುಂಜರ್ಪ, ಪ್ರದೀಪ್ ಕುಲಾಲ್, ಗಣೇಶ್ ಶೆಟ್ಟಿ,ಉದಯ ಉಜಿರೆ, ಶ್ರೀನಿವಾಸ್ ಮತ್ತಿತರರು ಜೊತೆಯಲ್ಲಿದ್ದರು.

Related posts

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಸ್ವಚ್ಛತಾ ಅಭಿಯಾನದ ಮಾಹಿತಿ ಕಾರ್ಯಕ್ರಮ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!