28.6 C
ಪುತ್ತೂರು, ಬೆಳ್ತಂಗಡಿ
September 19, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಶಿಕ್ಷಕ ರಕ್ಷಕ ಸಭೆಯು ಶಾಲಾ ಸಭಾಂಗಣದಲ್ಲಿ ಜೂ.13ರಂದು ನಡೆಯಿತು.

ಸಭಾ ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್, ಶಾಲಾ ಮುಖ್ಯ ಉಪಾಧ್ಯಾಯಿನಿ ಜಾಕಿನ್ ಬಿನ್ , ಶಾಲಾ ಅರೇಬಿಕ್ ಶಿಕ್ಷಣ ವಿಭಾಗದ ಮುಖ್ಯೋಪಾಧ್ಯಾಯ ಮುಹಮ್ಮದ್ ಶರೀಫ್ ಸಖಾಫಿ ಬೆದ್ರಬೆಟ್ಟು ಮತ್ತು ಅರೇಬಿಕ್ ಶಿಕ್ಷಣದ ಗುರುಗಳು ಉಪಸ್ಥಿತರಿದ್ದರು. 2026-27ನೇ ಸಾಲಿನ ಶಾಲಾ ವಾರ್ಷಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿಯನ್ನು ನೀಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ರವರು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದು.ಮಗುವಿನ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಕರ ಜೊತೆ ಪೋಷಕರು ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಶಾಲಾ ಅರೇಬಿಕ್ ಶಿಕ್ಷಣ ವಿಭಾಗದ ಮುಖ್ಯೋಪಾಧ್ಯಾಯರಾದ ಮುಹಮ್ಮದ್ ಶರೀಫ್ ಸಖಾಫಿ ಬೆದ್ರಬೆಟ್ಟು ಅರೇಬಿಕ್ ಶಿಕ್ಷಣದ ಬಗ್ಗೆ ಪೋಷಕರಿಗೆ ಮಾಹಿತಿಯನ್ನು ನೀಡಿದರು. ಸಂಸ್ಥೆಯ ಕಾರ್ಯದರ್ಶಿಯಾದ ಸಯ್ಯದ್ ಮಹಮ್ಮದ್ ಅಯ್ಯುಬ್ ರವರು ಮಾತನಾಡಿ, ಪೋಷಕರ ಪ್ರೀತಿ, ಸಹಕಾರದಿಂದ ಸಂಸ್ಥೆಯು ಉನ್ನತ ಮಟ್ಟಕ್ಕೇರುತ್ತಿದೆ.ಇದೇ ರೀತಿ ಮುಂದೆಯೂ ಸಂಸ್ಥೆಯ ಬೆಳವಣಿಗೆಗೆ ತಾವೆಲ್ಲರೂ ಸಹಕರಿಸಬೇಕೆಂದು ಕೇಳಿಕೊಳ್ಳುತ್ತ ಪೋಷಕರೆಲ್ಲರಿಗೂ ಧನ್ಯವಾದ ಸಮರ್ಪಿಸಿ ಸಭೆಯನ್ನು ಕೊನೆಗೊಳಿಸಲಾಯಿತು.

Related posts

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಾವೂರು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು: ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!