32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ.) ನಿಂದ ನಡೆಸಲ್ಪಡುವ ಎಲ್ ಸಿ‍ ಆರ್ ಇಂಡಿಯನ್‍ ವಿದ್ಯಾಸಂಸ್ಥೆಯ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಜೂ.15ರಂದು ನಡೆಸಲಾಯಿತು.

ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಗಳನ್ನು ನಿಭಾಯಿಸುವ, ಹಕ್ಕುಗಳನ್ನು ಚಲಾಯಿಸುವ ಹಾಗೂ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಸಲುವಾಗಿ ಅವಕಾಶವನ್ನು ಒದಗಿಸಲಾಯಿತು.

ಪ್ರಾಂಶುಪಾಲ ಜೋಸ್ಟನ್ ಲೋಬೊ, ಸಂಯೋಜಕ ಯಶವಂತ್ ಜಿ ನಾಯಕ್ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ವಿಂದ್ಯಾಶ್ರೀ, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್ ಇವರ ಮೇಲ್ವಿಚಾರಣೆಯಲ್ಲಿ ಹಾಗೂ ಉಪನ್ಯಾಸಕರ ಸಹಕಾರದಿಂದ ಚುನಾವಣಾ ಪ್ರಕ್ರಿಯೆಯನ್ನು ನ್ಯಾಯಯುತ ಮತ್ತು ಪಾರದರ್ಶಕವಾಗಿ ನಡೆಸಲಾಯಿತು. ಚುನಾವಣೆಯನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿ ವಿದ್ಯಾರ್ಥಿಗಳು ಚುನಾವಣೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು.

ಮತದಾನ ಪ್ರಕ್ರಿಯೆ ಮುಗಿದ ಸ್ವಲ್ಪ ಸಮಯದ ನಂತರ ಚುನಾವಣಾ ಫಲಿತಾಂಶಗಳನ್ನು ಘೋಷಿಸಲಾಯಿತು. ವಿದ್ಯಾರ್ಥಿ ಸಂಘದ ನಾಯಕನಾಗಿ ಬಿ.ಮಹಮ್ಮದ್ ಅತ್ತಾವುಲ್ಲ ಮತ್ತು ವಿದ್ಯಾರ್ಥಿ ಸಂಘದ ಉಪ ನಾಯಕಿಯಾಗಿ ಚೈತ್ರಾ ಯು.ಎಸ್ ಇವರು ಆಯ್ಕೆಯಾಗಿರುತ್ತಾರೆ.

Related posts

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya
error: Content is protected !!