September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

ಕೊಯ್ಯೂರು: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿಯಲ್ಲಿ 7 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸುವ ಮೂಲಕ, ಶಿಕ್ಷಣ ಕ್ಷೇತ್ರದಲ್ಲಿ 36 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಸಮಾಜ ವಿಜ್ಞಾನ ಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಮಹಾಬಲ ಗೌಡ ವಹಿಸಿ ಶುಭ ಹಾರೈಸಿದರು. ಮುಖ್ಯ ಗುರು ಬಾಲಕೃಷ್ಣ ಕೆ. ವಿಜಯ ಕುಮಾರ್ ರವರ ಕರ್ತವ್ಯ ಪ್ರಜ್ಞೆ, ಬದ್ಧತೆ, ಇವುಗಳ ಬಗ್ಗೆ ಅಭಿನಂದನಾ ನುಡಿಗಳನ್ನಾಡಿದರು.

ಕೋಲಾರದ ಚಿನ್ನದ ಗಣಿಯ ನಿವೃತ್ತ CEO ತಿಮ್ಮಪ್ಪ ಗೌಡ ಸೋಣಕುಮೇರು, ಶುಭ ಕೋರಿದರು. ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ ವಿಶ್ರಾಂತ ಪ್ರಾಂಶುಪಾಲ ಯದುಪತಿ ಗೌಡ, ಬಂದಾರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆ ಪರಮೇಶ್ವರಿ , ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ, ಸರ್ಕಾರಿ ಪ್ರೌಢಶಾಲೆ ಕೊಯ್ಯೂರಿನ ಮುಖ್ಯೋಪಾಧ್ಯಾಯ ಸುಧಾಕರ ಶೆಟ್ಟಿ, ಪದ್ಮುಂಜ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಸುಮತಿ, ಮೈರೋಳ್ತಡ್ಕ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ, ಬಂದಾರು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ ಎಂ.ಯು., ಪೆರ್ಲ ಬೈಪಾಡಿ ಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ, ಕುಂಟಾಲಪಲ್ಕೆ ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ, ಮೊಗ್ರು ಶಾಲಾ ಮುಖ್ಯ ಶಿಕ್ಷಕ ಮಾಧವ ಗೌಡ, ಬಜಿಲ ಕಿ.ಪ್ರಾ.ಶಾಲಾ ಮುಖ್ಯ ಶಿಕ್ಷಕ ಸೀತಾರಾಮ, ಉಪಸ್ಥಿತರಿದ್ದು ಶುಭ ಹಾರೈಸಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಹರೀಶ್ ಗೌಡ ಪರಪಾಜೆ, ಅನಿತಾ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ, ಎ.ಪಿ.ಎಂ.ಸಿ. ಮಾಜಿ ನಿರ್ದೇಶಕ ಹೊನ್ನಪ್ಪ ಗೌಡ, ವಿವಿಧ ಶಾಲೆಗಳಿಂದ ಆಗಮಿಸಿದ ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಊರಿನ ಗಣ್ಯರು ಹಾಜರಿದ್ದು ಶುಭ ಹಾರೈಸಿದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಹಿರಿಯ ಶಿಕ್ಷಕ ವಿವೇಕಾನಂದ ಗೌಡ, ಸ್ವಾಗತಿಸಿದರು. ಮೇಧಾ ಕೆ. ಸನ್ಮಾನ ಪತ್ರ ವಾಚಿಸಿದರು. ಹಿಂದಿ ಶಿಕ್ಷಕ ಮೃತ್ಯುಂಜಯ ತಂಬಾಕದ ಧನ್ಯವಾದವಿತ್ತರು. ಸಹಶಿಕ್ಷಕ ಮಹೇಶ್ ಎ. ಕಾರ್ಯಕ್ರಮ ನಿರೂಪಿಸಿದರು.

Related posts

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ‘ಟ್ಯಾಲೆಂಟ್ ಹ್ಯೂಸ್ 2026’ ಸಂಭ್ರಮ

Suddi Udaya
error: Content is protected !!