September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ತರಗತಿಗೆ ಚಾಲನೆ

ಮಚ್ಚಿನ: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ವತಿಯಿಂದ ನಡೆಯುವ ಉಚಿತ ಯಕ್ಷ ಶಿಕ್ಷಣವು ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದೀಪ ಪ್ರಜ್ವಲನೆಯೊಂದಿಗೆ ಚಾಲನೆ ನೀಡಲಾಯಿತು.

ಟ್ರಸ್ಟಿ ಭುಜಬಲಿ ಧರ್ಮಸ್ಥಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಂದಿನ ಪೀಳಿಗೆಗೂ ಯಕ್ಷಗಾನ ಕಲೆ ಉಳಿಯಬೇಕು, ಜೊತೆಗೆ ಮಕ್ಕಳಲ್ಲಿ ಯಕ್ಷಗಾನ ಕಲೆಯ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಫೌಂಡೇಶನಿನ ವಿವಿಧ ಯೋಜನೆಗಳು ಮತ್ತು ಕಾರ್ಯಗಳ ಬಗ್ಗೆ ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿ ಬೆಳ್ತಂಗಡಿ ಘಟಕದ ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ ಮಾತನಾಡಿ, ಯಕ್ಷಗಾನ ಯಾಕೆ ಕಲಿಯಬೇಕು ಅದರಿಂದ ಬದುಕಿಗೆ ಏನು ಪ್ರಯೋಜನಗಳಿವೆ ಎನ್ನುವ ವೇಳೆ ವಿಚಾರಗಳನ್ನು ತಿಳಿಸಿದರು.

ಯಕ್ಷಶಿಕ್ಷಕ ದೇವಿಪ್ರಸಾದ್ ಆಚಾರ್ಯ ಗುರುವಾಯನಕೆರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಗುರು ಅಕ್ಷತಾ ಪ್ರಾಸ್ತಾವಿಸಿ, ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಮೌಲ್ಯ ನಿರೂಪಿಸಿದರು. ಅದ್ವಿತ್ ವಂದಿಸಿದರು. ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ: ಅಝರ್ ನಾವೂರು

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!