32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮತ್ತು ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ರಸ್ತೆ ಸುರಕ್ಷತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಮಾದಕ ವಸ್ತುಗಳ ದುಷ್ಪರಿಣಾಮ, ಗಾಂಜಾ ಸೇವನೆಯ ಅಪಾಯ, ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿಂಗಪ್ಪ ಡಿ ಜಕ್ಕಣ್ಣನವರ್ ಪೊಲೀಸ್ ಉಪನಿರೀಕ್ಷಕರು ಸಂಚಾರ ಠಾಣೆ ಬೆಳ್ತಂಗಡಿ ಹಾಗೂ ರೇಣುಕಾ ಪೊಲೀಸ್ ಕಾನ್ಸ್ಟೇಬಲ್ ಭಾಗವಹಿಸಿದ್ದರು.

ಅತಿಥಿಗಳು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮಹತ್ವ, ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ಸಂರಕ್ಷಣೆ, ಮಾದಕ ವಸ್ತುಗಳ ದುಷ್ಪರಿಣಾಮಗಳು, ಬಾಲ್ಯ ವಿವಾಹದ ವಿರುದ್ಧ ಇರುವ ಕಾನೂನು ಕ್ರಮಗಳು ಹಾಗೂ ಪೋಕ್ಸೋ ಕಾಯ್ದೆಯ ಪ್ರಮುಖ ಅಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ಬೆಳೆದು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕೆಂದು ಅವರು ಕರೆ ನೀಡಿದರು.

ಶಿಕ್ಷಕ ಶ್ರೇಯಾಂಸ ಜೈನ್ ನಿರೂಪಿಸಿ, ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಎಚ್.ಆರ್.ಡಿ. ಕ್ಲಬ್‌ನ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

Suddi Udaya
error: Content is protected !!