32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

ಧರ್ಮಸ್ಥಳ: ಕೂಟ ಮಹಾಜಗತ್ತು ಸಾಲಿಗ್ರಾಮ, ಬೆಳ್ತಂಗಡಿ ಅಂಗ ಸಂಸ್ಥೆಯ 28ನೇ ವಾರ್ಷಿಕ ಮಹಾಸಭೆಯು ಧರ್ಮಸ್ಥಳ ಅಜಕೂರಿಯ ಸೂರ್ಯ ಕಮಲ್ ಮಹಲ್‌ನಲ್ಲಿ ಜೂ.13ರಂದು ನಡೆಯಿತು.

ಶ್ರೀ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಕಾರಂತ್ ದೇವಸ್ಥಾನದ ವತಿಯಿಂದ ಶ್ರೀ ಗುರುನರಸಿಂಹ ದೇವರ ಆಶೀರ್ವಾದ ಹಾಗೂ ಗುರುಸಂದೇಶವನ್ನು ನೀಡಿದರು.

ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ಅಧ್ಯಕ್ಷ ಸತೀಶ್ ಹಂದೆ, ಶ್ರೀ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮದ ಕೋಶಾಧಿಕಾರಿ ಲಕ್ಷ್ಮೀನಾರಾಯಣ ಹೊಳ್ಳ, ಕೂಟ ಮಹಾಜಗತ್ತು ಮಂಗಳೂರು ಅಂಗ ಸಂಸ್ಥೆಯ ಅಧ್ಯಕ್ಷ ಶ್ರೀಧರ ಹೊಳ್ಳ, ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ವಿಶ್ವನಾಥ ಹೊಳ್ಳ, ಮಹಿಳಾ ವೇದಿಕೆಯ ಅಧ್ಯಕ್ಷೆ ಗೀತಾ ವಿ. ರಾವ್ ಹಾಗೂ ಮಹಿಳಾ ವೇದಿಕೆಯ ಕಾರ್ಯದರ್ಶಿ ಸಂತೋಷಿನಿ ಕಾರಂತ್ ಉಪಸ್ಥಿತರಿದ್ದರು.

ಅಧ್ಯಕ್ಷತೆಯನ್ನು ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ಅಧ್ಯಕ್ಷ ವಾಸುದೇವ ಸೋಮಯಾಜಿ ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕರ್ನಾಟಕ ಶಿಕ್ಷಣ ಸಂಸ್ಥೆಗಳ ನೌಕರ ಸಂಘದ ವತಿಯಿಂದ ರಾಜ್ಯಮಟ್ಟದ “ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ” ಪಡೆದ ಶ್ರೀ ರಮೇಶ್ ಮಯ್ಯ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ವಿದ್ಯಾ ಸೋಮಯಾಜಿ ನಿರೂಪಿಸಿದರು. ಸಂಸ್ಥೆಯ ಉಪಾಧ್ಯಕ್ಷ ವೆಂಕಟ್ರಮಣ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ರಮೇಶ್ ಮಯ್ಯ ವಂದಿಸಿದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಜಡಿಮಳೆಗೆ ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಮಣ್ಣಸಂಕ ಮುಳುಗಡೆ, ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya
error: Content is protected !!