28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್- ಕಾರ್ಯಕ್ರಮ

ಜೆಸಿಐ ಇಂಡಿಯಾದ ವಲಯ 15ರ ವಲಯದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮವನ್ನು ಜೆಸಿಐ ಉಜಿರೆ ಘಟಕದ ವತಿಯಿಂದ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಮೊಹಮ್ಮದ್ ಮಿರ್ಷಾದ್ ರವರು ವಹಿಸಿ ಪ್ರಾಸ್ತವಿಸಿ, ಸ್ವಾಗತಿಸಿದರು.

ಮುಖ್ಯ ಅತಿಥಿಗಳಾದ ಮುಳಿಯ ಬೆಳ್ತಂಗಡಿ ಇದರ ವ್ಯವಸ್ಥಾಪಕ ಲೋಹಿತ್ ಕುಮಾರ್ ಹಾಗೂ ಕಲ್ಮಂಜ ಶಾಲೆಯ ಮುಖ್ಯೋಪಾಧ್ಯಾಯಿನಿ ಮಂಜುಳಾ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಲ್ಮoಜ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಸಿಬ್ಬಂದಿ ಮತ್ತು ವಾಟರ್ ಮ್ಯಾನ್ ಆಗಿ ಜನರ ನೀರಿನ ಅಗತ್ಯಗಳಿಗೆ ಸದಾ ಸ್ಪಂದಿಸುತ್ತಿರುವ ಅಬ್ದುಲ್ ರಹಮಾನ್ ರವರನ್ನು ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಸನ್ಮಾನ ಪತ್ರದೊಂದಿಗೆ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪರಿಸರ ಪ್ರೇಮಿ ಹಾಗೂ16 ವರ್ಷಗಳಿಂದ ಪೋಸ್ಟ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿರುವ ರಾಜಪ್ಪ ನಾಯ್ಕ ಇವರಿಗೆ ಸಾಧಕರ ಸನ್ಮಾನ ಪತ್ರದೊಂದಿಗೆ ಗೌರವಿಸಲಾಯಿತು. ಜೇಸಿ ಹೇಮಾವತಿ ವೇದಿಕೆಗೆ ಆಹ್ವಾನಿಸಿದರು. ಘಟಕದ ಕಾರ್ಯದರ್ಶಿ ಭವ್ಯಶ್ರೀ ಕೀರ್ತಿರಾಜ್ ರವರು ಸನ್ಮಾನ ಪತ್ರ ವಾಚಿಸಿ, ಧನ್ಯವಾದವಿತ್ತರು. ಜೇಸಿ ಸದಸ್ಯೆ ಸುಮಿತ್ರ ಸಹಕರಿಸಿದರು.

Related posts

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!