September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ

ಉಜಿರೆ : ಕೃಷಿಯು ಪ್ರತಿಯೊಬ್ಬರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿದ್ದು, ಕೃಷಿಯೊಂದಿಗೆ ಪೂರಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆದಾಯ ಗಳಿಸಲು ಸಾಧ್ಯವೆಂದು ಸತತವಾದ ಪ್ರಯತ್ನದೊಂದಿಗೆ ಮುಂದುವರೆಯಿರಿ, ಜಮೀನಿನಲ್ಲಿ ಸಾಧ್ಯವಾದಷ್ಟು ವಿವಿಧ ಕೃಷಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್ ಅಭಿಪ್ರಾಯಪಟ್ಟರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ವತಿಯಿಂದ ಆಯೋಜಿಸಲಾದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿ ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್‌ಸೆಟ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ್ ಕುಮಾರ್ ವಹಿಸಿ ಮಾತನಾಡಿ, ತರಬೇತಿಯ ಮೂಲಕ ಪಡೆದ ಜ್ಞಾನ ಹಾಗೂ ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಯಶಸ್ವಿ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಶಿಬಿರಾರ್ಥಿಗಳಿಗೆ ಪ್ರೇರಣೆ ನೀಡಿದರು.

ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಕರುಣಾಕರ್ ಕೆ ಜೈನ್ ನಿರೂಪಿಸಿದರು. ಲತಾ ಮತ್ತು ಬಳಗದವರು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಗುರುರಾಜ್, ಜೇಮ್ಸ್ ಹಾಗೂ ಹೇಮಾವತಿ ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!