September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ನಡೆಯುವ ಒಂದು ವಾರದ ಯೋಗ ತರಬೇತಿ ಶಿಬಿರವನ್ನು ಜೂ.16 ರಂದು ಗಣ್ಯರ ಸಮ್ಮುಖದಲ್ಲಿ ಸಾಂಕೇತಿಕವಾಗಿ ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿನ ವೈದ್ಯಶಾಸ್ತ್ರದ ಉಪನ್ಯಾಸಕಿ ಡಾ. ರೆನಿತಾ ಮಾತನಾಡಿ “ಯೋಗ ಎಂಬುವುದು ಅತ್ಯಂತ ಪ್ರಾಚೀನವಾದದ್ದು,ಇದು ಆರೋಗ್ಯಕರ ಜೀವನ ಸಾಗಿಸಲು ಇರುವ ಸುಲಭ ಮಾರ್ಗ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ವಹಿಸಿ ಮಾತನಾಡಿ “ಮಕ್ಕಳಲ್ಲಿ ಏಕಾಗ್ರತೆ ಬರಲು ಯೋಗ ಸಹಕಾರಿಯಾಗಿದೆ, ಒಂದು ವಾರಗಳ ಕಾಲ ನಡೆಯಲಿರುವ ಈ ಶಿಬಿರ ಉತ್ತಮ ರೀತಿಯಲ್ಲಿ ನಡೆಯಲಿ” ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಅನಘಾ ಭಟ್ ಹಾಗೂ ಸಾನಿಕ ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕಿ ಗೀತಾ ಸ್ವಾಗತಿಸಿದರು. ಸಹ ಶಿಕ್ಷಕಿ ರೇವತಿ ವಂದಿಸಿದರು.
ಶಾಲಾ ದೈಹಿಕ ಶಿಕ್ಷಕ ಪ್ರಜ್ವಲ್ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಬಂದಾರು: ಮೈರೋಳ್ತಡ್ಕ ಶಿವ ಗೆಳಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!