September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕೊಕ್ಕಡ : ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು(ಜೂ.16) ಬೆಳಗ್ಗೆ ನಡೆದಿದೆ.

ಮೃತರನ್ನು ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್ ಅವರ ಪುತ್ರಿ ಶ್ವೇತಾ(18) ಎಂದು ಗುರುತಿಸಲಾಗಿದೆ. ಕಳೆದ ಸುಮಾರು ಐದು ವರ್ಷಗಳಿಂದ ಶ್ವೇತಾ ಅವರ ತಂದೆ-ತಾಯಿ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಮಾಹಿತಿಯ ಪ್ರಕಾರ, ಶ್ವೇತಾ ಎಂದಿನಂತೆ ಬೆಳಗ್ಗೆ ಎದ್ದು ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದರು. ಘಟನೆ ನಡೆದ ವೇಳೆ ತಂದೆ ಕೆಲಸದ ನಿಮಿತ್ತ ಹೊರಗೆ ತೆರಳಿದ್ದು, ತಾಯಿ ಮಾತ್ರ ಮನೆಯಲ್ಲಿ ಇದ್ದರು ಎನ್ನಲಾಗಿದೆ. ಈ ಮಧ್ಯೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶ್ವೇತಾ ಪತ್ತೆಯಾಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya
error: Content is protected !!