September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲಾ ಸಂಸತ್ತು ಉದ್ಘಾಟನೆ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಜೂ.15 ರಂದು ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಈ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ನಾಯಕನಾಗಿ 10ನೇ ತರಗತಿಯ ಜೀತನ್ ಪಿರೇರಾ ಆಯ್ಕೆಯಾಗಿರುತ್ತಾರೆ. ಶಾಲಾ ಉಪನಾಯಕಿಯಾಗಿ ಪ್ರೀಮಾ ವೇಗಸ್ ನೇಮಕಗೊಂಡರು. ಮರಿಯಾ ಜ್ಯೋತಿ ಡಿಸೋಜ ಅವರು ಸಭಾಧ್ಯಕ್ಷೆಯಾಗಿ ಹಾಗೂ ಪ್ರಿನ್ಸಿಯಾ ಮೋನಿಸ್ ಅವರು ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿ, ಶಾಲೆಯ ಶಿಸ್ತು, ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಶ್ರಮಿಸುವುದಾಗಿ ಪ್ರತಿಜ್ಞೆ ಮಾಡಿದರು. ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ ಡಿಸೋಜರವರು ವಿದ್ಯಾರ್ಥಿ ನಾಯಕರಿಗೆ ಶುಭ ಹಾರೈಸಿ, ಜವಾಬ್ದಾರಿಯುತ ನಾಯಕತ್ವವನ್ನು ನೀಡುವಂತೆ ಪ್ರೇರೇಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya
error: Content is protected !!