September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ ಬುರುಡೆ ಪ್ರಕರಣದ ಚಿನ್ನಯ್ಯ ಹೈಕೋರ್ಟ್ ರಿಟ್ ಪಿಟಿಷನ್ ಹಾಕಿರುವ ಬಗ್ಗೆ ಮಾತುಕತೆ ನಡೆಸಲು ತೆರಳುತ್ತಿದ್ದಾಗ ಜೂ.16 ರಂದು ಮಧ್ಯಾಹ್ನ ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪೊಲೀಸ್ ಇಲಾಖೆಯ KA-01-G-6463 ಇನೋವಾ ಕಾರು ಪಲ್ಟಿಯಾಗಿದೆ.

ಇನೋವಾ ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯವಾಗಿಲ್ಲ, ಇನೋವಾ ಕಾರು ಪಲ್ಟಿ ರಭಸಕ್ಕೆ ಹಾನಿಯಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಕಾರಿನಲ್ಲಿದ್ದ ನಾಲ್ಕು ಜನ ಆಗಮಿಸಿದ್ದಾರೆ.

Related posts

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!