September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ ಜೂ.16ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲೆ ಸುಜಾತ ಭಟ್ ಉದ್ಘಾಟಿಸಿ ಮಾತನಾಡಿದರು.

ಯೋಗವೆನ್ನುವುದು ಇಂದು ನಿನ್ನೆಯದಲ್ಲ. ಇದು ಋಗ್ವೇದ ಕಾಲದಲ್ಲಿಯೂ ಇತ್ತು. ಋಷಿಮುನಿಗಳು ಇದಕ್ಕೆ ಮಹತ್ವ ಕೊಡುತ್ತಿದ್ದರು. ಯಾವುದೇ ರೋಗರುಜಿನ ಯೋಗದಿಂದ ಗುಣವಾದ ಉದಾಹರಣೆಗಳು ಇದೆ. ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಬಹಳ ಉತ್ತಮ ಮಾರ್ಗ ಎಂದರು.

ಹಿರಿಯ ಶಿಕ್ಷಕ ಚಂದ್ರಶೇಖರ್ ಭಟ್ ಮಾತನಾಡಿ, ಯೋಗಾಭ್ಯಾಸದಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಓದಿನ ಕಡೆಗೆ ಆಸಕ್ತಿ ಹೆಚ್ಚುತ್ತದೆ. ಆತ್ಮವಿಶ್ವಾಸ ಬೆಳೆಯುತ್ತದೆ ಎಂದರು. ಮುಖ್ಯೋಪಾಧ್ಯಾಯಿನಿ ವಿದ್ಯಾ ಟಿ. ಅಧ್ಯಕ್ಷತೆ ವಹಿಸಿದ್ದರು.

ಯೋಗ ತರಬೇತುದಾರರು, ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಾಂಜಲಿ ಪುನೀತ್ ಮತ್ತು ವ್ಯಟ್ರಿ ವೆಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಕನಕಶ್ರೀ ಸ್ವಾಗತಿಸಿ, ಶ್ವೇತಾ ವಂದಿಸಿ, ಅನನ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿ.ಸಿ ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಸಂಸದ ಕ್ಯಾ. ಚೌಟರಿಂದ ಪೊಲೀಸ್ ಇಲಾಖೆಗೆ ಆಗ್ರಹ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!