September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

ಉಜಿರೆ : ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಕೃಷಿ ಇಲಾಖೆ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾಂಗಣದಲ್ಲಿ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ವಹಿಸಿದ್ದು ಕಾರ್ಯಕ್ರಮದಲ್ಲಿ ಕೆ.ವಿ.ಕೆ ವಿಜ್ಞಾನಿ ಡಾ. ರಶ್ಮಿ ಯವರು ಸಮಗ್ರ ಬೇಸಾಯದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು NRLM ವಿಭಾಗದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ರವರು NRLM ಸಂಜೀವಿನಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಕೃಷಿ ಇಲಾಖೆ ಕೃಷಿ ಅಧಿಕಾರಿ ಗಣೇಶ್, ಹಾಗೂ ಇಲಾಖೆಯ ನವನೀತ , ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು, ರೈತರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಮ್.ಬಿ.ಕೆ ಸಂಧ್ಯಾ ಸ್ವಾಗತಿಸಿ, ಕೃಷಿ ಸಖಿ ಭಗೀರಥಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಡಾ.ಮೋಹನ್ ಆಳ್ವ ರವರಿಗೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಅಭಿನಂದನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya

ಮದ್ದಡ್ಕ: ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya
error: Content is protected !!