September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಸಿಬಿಎಸ್‌ಇ ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

ಉಜಿರೆ: 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಎಸ್‌ಡಿಎಂ ಸಿಬಿಎಸ್‌ಇ ಶಾಲೆಯಲ್ಲಿ ಯೋಗ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಡೀನ್ ಹಾಗೂ ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಭಾಗವಹಿಸಿ ಯೋಗದ ಮಹತ್ವದ ಕುರಿತು ಉಪನ್ಯಾಸ ನೀಡಿದರು. ಯೋಗವು ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯವನ್ನು ಕಾಪಾಡುವ ಸಮಗ್ರ ಜೀವನ ಪದ್ಧತಿಯಾಗಿದ್ದು, ವಿದ್ಯಾರ್ಥಿಗಳು ದಿನನಿತ್ಯದ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂ ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಜೀವನಶೈಲಿ ಬೆಳೆಸುವಲ್ಲಿ ಯೋಗದ ಪಾತ್ರ ಮಹತ್ತರವಾಗಿದೆ ಎಂದು ಅಭಿಪ್ರಾಯಪಟ್ಟರು.

ಯೋಗ ಸಪ್ತಾಹದ ಅಂಗವಾಗಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಧ್ಯಾನದ ತರಬೇತಿಯನ್ನು ನೀಡಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರೀ ರಾಘವೇಂದ್ರ ಮಠದ ಪರಿಸರ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya
error: Content is protected !!