September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

ಬೆಳ್ತಂಗಡಿ : ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ನೇತೃತ್ವದಲ್ಲಿ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ‌ಹಾಗೂ ಒಕ್ಕೂಟ ಬಲವರ್ಧನೆ ತರಬೇತಿಯನ್ನು ಜೂ. 16 ರಂದು ಸಾಥೋಮ್ ಟವರ್ ಬೆಳ್ತಂಗಡಿ ಇಲ್ಲಿ ಆಯೋಜಿಸಲಾಗಿತ್ತು.

ಒಕ್ಕೂಟದ ಅಧ್ಯಕ್ಷೆ ಮಂಜುಳಾ ಜೋನ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ನಿಕಟಪೂರ್ವ ನಿರ್ದೇಶಕರಾದ ವಂ. ಫಾದರ್ ಬಿನೋಯ್ ಎಜೆ ರವರು ಒಕ್ಕೂಟಗಳು ಬಲವರ್ಧನೆಗೊಂಡು ಸಾಮಾಜಿಕ, ರಾಜಕೀಯ, ಆರ್ಥಿಕ, ಪರಿಸರ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಮುಂದಾಗಬೇಕು ಹಾಗೂ ಪದಾಧಿಕಾರಿಗಳ ಪಾತ್ರ ಮತ್ತು ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. 2026 ರಿಂದ 2029 ವರೆಗಿನ ಒಕ್ಕೂಟದ ನೂತನ ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಫಿಲೋಮಿನಾ ಸಿಜೆ, ಉಪಾಧ್ಯಕ್ಷರಾಗಿ ಉಷಾ, ಕಾರ್ಯದರ್ಶಿಯಾಗಿ ವೈಶಾಲಿ, ಜೊತೆ ಕಾರ್ಯದರ್ಶಿಯಾಗಿ ರೋಶನಿ, ಕೋಶಾಧಿಕಾರಿಯಾಗಿ ಶುಭ ಇವರನ್ನು ಆಯ್ಕೆ ಮಾಡಲಾಯಿತು. ಸಮಿತಿ ಸದಸ್ಯರಾಗಿ ಸಂಧ್ಯಾ ಉಮೇಶ್, ಪ್ರಭಾವತಿ, ಮಂಜುಳಾ ಜೋನ್, ಮಿನಿ ತೋಮಸ್ ಹಾಗೂ ಎಲಿಯಮ್ಮ ತೋಮಸ್ ಇವರನ್ನು ಆಯ್ಕೆ ಮಾಡಲಾಯಿತು. ಡಿ.ಕೆ.ಆರ್. ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾದರ್ ಆದರ್ಶ್ ಪಿ.ಎಸ್ ರವರು ಎಸ್.ಐ.ಆರ್ ಬಗ್ಗೆ ಮಾಹಿತಿ ನೀಡಿದರು. ಹಿಂದಿನ ಸಮಿತಿ ಸದಸ್ಯರು 3 ವರ್ಷ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದು ಅವರನ್ನು ಅಭಿನಂದಿಸಲಾಯಿತು. ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಎಲಿಯಮ್ಮ ತೋಮಸ್ ಸ್ವಾಗತಿಸಿದರು. ವೈಶಾಲಿ ವಂದಿಸಿದರು. ಸ್ನೇಹ ಜ್ಯೋತಿ ಒಕ್ಕೂಟದ 50 ಸದಸ್ಯರು ಭಾಗವಹಿಸಿದ್ದರು.

Related posts

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya
error: Content is protected !!