September 17, 2026
ತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಉಜಿರೆ: ಅನುಗ್ರಹ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ನೂತನ ವಿದ್ಯಾರ್ಥಿ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂ.18 ರಂದು ಅನುಗ್ರಹ ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶ್ರೀನಿವಾಸ್ , ಪಿಡಿಓ ಗ್ರಾಮ  ಪಂಚಾಯಿತ್ ಮಡಂತ್ಯಾರ್ , ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಮಂತ್ರಿಮಂಡಲದ ಸದಸ್ಯರಿಗೆ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ. ವಿಜಯ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು.

ವಿದ್ಯಾರ್ಥಿ ಮಂತ್ರಿಮಂಡಲದಲ್ಲಿ ಕಾಲೇಜು ವಿಭಾಗದ ಅಧ್ಯಕ್ಷರಾಗಿ ನೀರಜ್ ಎಂ, ಕಾರ್ಯದರ್ಶಿಯಾಗಿ ಅಫ್ರಿನಾ, ಪ್ರೌಢಶಾಲಾ ವಿದ್ಯಾರ್ಥಿ ನಾಯಕನಾಗಿ ಗಗನ್ ಡಿ., ಉಪನಾಯಕಿಯಾಗಿ ರಿಶಲ್ ಫೆರ್ನಾಂಡಿಸ್, ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ವಾಟ್ಸನ್ ಮೋನಿಸ್, ಉಪನಾಯಕಿಯಾಗಿ ರಕ್ಷಾ ಪಂಡಿತ್ ಹಾಗೂ ಇತರ ಮಂತ್ರಿಮಂಡಲ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿ ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುವ ಸಂಕಲ್ಪ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ಅವರು, ಯುವ ನಾಯಕತ್ವದಲ್ಲಿ ಜವಾಬ್ದಾರಿ, ಸೇವಾ ಮನೋಭಾವ, ಶಿಸ್ತು ಮತ್ತು ರಾಷ್ಟ್ರಪ್ರೇಮದ ಮೌಲ್ಯಗಳು ಅಡಕವಾಗಿದ್ದು, ಇವುಗಳನ್ನು ಅಳವಡಿಸಿಕೊಂಡು ಇಂದಿನ ಯುವಪೀಳಿಗೆ ಬೆಳೆಯಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾದ ಮಡಂತ್ಯಾರ್ ಗ್ರಾಮ ಪಂಚಾಯಿತಿನ ಪಿಡಿಓ ಆಗಿರುವ ಶ್ರೀನಿವಾಸ್  ಅವರು, ಶಾಲಾ ಮಂತ್ರಿಮಂಡಲವು ಪ್ರಜಾಪ್ರಭುತ್ವ ವ್ಯವಸ್ಥೆಯ ಒಂದು ಉತ್ತಮ ಮಾದರಿಯಾಗಿದ್ದು, ಇದು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಜವಾಬ್ದಾರಿತನ, ಸಹಕಾರ ಮನೋಭಾವ ಹಾಗೂ ಶಿಸ್ತಿನ ಅರಿವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಪ್ರಾಂಶುಪಾಲರಾದ ವಂದನೀಯ ಫಾ. ಡಾ.ವಿಜಯ್ ಲೋಬೊ ಅವರು ನೂತನ ಮಂತ್ರಿಮಂಡಲದ ಸದಸ್ಯರಿಗೆ ತಮ್ಮ ಕರ್ತವ್ಯಗಳು, ಜವಾಬ್ದಾರಿಗಳು ಹಾಗೂ ನಾಯಕತ್ವದ ಮೌಲ್ಯಗಳ ಕುರಿತು ಮಾರ್ಗದರ್ಶನ ನೀಡಿದರು. ಜೊತೆಗೆ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ಸದಸ್ಯರಿಗೆ ಶುಭ ಹಾರೈಸಿದರು.

ಸಹಶಿಕ್ಷಕಿ ವಿನಯಲತಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ನಿಶ್ಚಿತ್, ಭರತ್ ಹಾಗೂ ಶಾಲೆಯ ಸಹಶಿಕ್ಷಕರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಎಸ್.ಐ.ಟಿ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya
error: Content is protected !!