September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್(ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಜೂ.18 ರಂದು ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿ ಪೂರ್ವ ವಿಭಾಗದ 2026-27ನೇ ಶೈಕ್ಷಣಿಕ ಸಾಲಿನ “ನವಯಾನ” ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದೊಂದಿಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡುವ ಮೂಲಕ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಪದವಿಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯ ಎನ್. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ. ನಾಯಕ್ ಮಾತಾನಾಡಿ, ವಿದ್ಯಾಥಿ೯ಗಳು ಧನಾತ್ಮಕ ಚಿಂತನೆಯೊಂದಿಗೆ ಅವಿರತ ಶ್ರಮವಹಿಸಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದರೆ ಮಾತ್ರ ಇಂದಿನ ದಿನಗಳಲ್ಲಿ ಗುರಿಮುಟ್ಟಲು ಸಾಧ್ಯ ಎಂಬ ಪ್ರೇರಣಾತ್ಮಕ ಮಾತುಗಳನ್ನು ಹೇಳಿದರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪ್ರತಿಯೊಂದು ಸಂಸ್ಥೆಯು ಯಶಸ್ವಿಯಾಗಿ ಮುನ್ನಡೆಯುವಲ್ಲಿ ನಾಯಕತ್ವ, ಶೈಕ್ಷಣಿಕ ವಾತಾವರಣ ಬಹಳ ಮುಖ್ಯ ಎಂದು ಪ್ರೇರಣಾತ್ಮಕ ಮಾತುಗಳಿಂದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು .


ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಬೋಧಕ ಬೋಧಕೇತರ ವೃಂದದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಂಪನ್ನಗೊಂಡಿತು .

Related posts

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಬಿಜೆಪಿ ಯುವಮೋರ್ಚಾ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಮರು ನೇಮಕ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!