September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎನ್‌ಡಿಆರ್‌ಎಫ್ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ವತಿಯಿಂದ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎನ್‌ಡಿಆರ್‌ಎಫ್ ತಂಡದ ಕಮಾಂಡರ್ ಶಾಂತಿಲಾಲ್ ಜಟಿಯಾ, ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ ಸುಭಾಷ್ ಸಿಂಧೆ ಹಾಗೂ ರಕ್ಷಕರಾದ ಚಂದ್ರಶೇಖರ್ ರೆಡ್ಡಿ, ಬಾಲಕೃಷ್ಣ ಮತ್ತು ವಿ. ಶ್ರೀನಿವಾಸಲು ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ ಸುಭಾಷ್ ಸಿಂಧೆ ಅವರು ಭೂಕಂಪದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಜನಸಂದಣಿಯ ನೂಕುನುಗ್ಗಲಿನಿಂದ ಪಾರಾಗುವ ವಿಧಾನಗಳು, ಪ್ರಥಮ ಚಿಕಿತ್ಸೆ, ಗಂಟಲಲ್ಲಿ ಆಹಾರ ಅಥವಾ ಇತರ ವಸ್ತು ಸಿಲುಕಿದಾಗ ನೀಡಬೇಕಾದ ತುರ್ತು ನೆರವು, ಸಿಪಿಆರ್ (CPR), ಕುಸಿದ ಕಟ್ಟಡಗಳ ರಕ್ಷಣಾ ಕಾರ್ಯಾಚರಣೆ ಹಾಗೂ ನೀರಿನಲ್ಲಿ ಮುಳುಗುವವರ ರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ.ಆರ್. ಅವರ ಮಾರ್ಗದರ್ಶನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ವಿಜ್ಞಾನ ಸಂಘ ಹಾಗೂ ಗಣಿತ ಸಂಘಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ, ವಿಜ್ಞಾನ ಸಂಘದ ಸದಾನಂದ ಎ., ಶ್ರೀಮತಿ ನಯನ ಹಾಗೂ ಸ್ಕೌಟ್-ಗೈಡ್ ಶಿಕ್ಷಕರಾದ ಮಂಜುನಾಥ್, ನೀತಾ ಕೆ.ಎಸ್., ಜಯರಾಮ್, ಜಯಲಕ್ಷ್ಮಿ, ಗೀತಾ ಪಿ., ರಮ್ಯಾ ಬಿ.ಎಸ್., ಪ್ರಮೀಳಾ ಎನ್., ಅಮಿತಾ ಸಮತಾ, ಸೌಮ್ಯಾ ಪಿ., ಪುಷ್ಪಲತಾ ಮತ್ತು ಮೋಹಿನಿ ಅವರು ಸಹಕರಿಸಿದರು.


ಕಬ್ ಮಾಸ್ಟರ್ ನೀತಾ ಕೆ ಎಸ್ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಅಭಿಯಾನ: ಕ್ಷಣಿಕ ಸುಖಕ್ಕೆ, ಶಾಶ್ವತ ಸುಖ ಕಳೆದು ಕೊಳ್ಳಬೇಡಿ: ಬಿ. ಸೋಮಶೇಖರ ಶೆಟ್ಟಿ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!