September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.21: ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ತರಬೇತಿ ಕಾರ್ಯಾಗಾರ

ಬಳಂಜ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕಲೆ, ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ‘ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇವುಗಳ ಜಂಟಿ ಆಶ್ರಯದಲ್ಲಿ ದತ್ತಿನಿಧಿಯಿಂದ ಉಚಿತ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ತರಭೇತಿ ಕಾರ್ಯಾಗಾರವು ಜೂ.21ರಂದು ಬೆಳಿಗ್ಗೆ ಗಂಟೆ 10.00 ರಿಂದ ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ನಡೆಯಲಿದೆ.

ನಿವೃತ್ತ ಸೈನಿಕ ದಾಸಪ್ಪ ಪೂಜಾರಿ ಎನ್ ಮತ್ತು ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನ ಮಂಗಳೂರು ಇದರ ಅಧ್ಯಕ್ಷ ಸುರೇಶ್ ಕೆ ಪಾಂಡವರ ಕಲ್ಲು ವಿದ್ಯಾರ್ಥಿಗಳಿಗೆ ತರಭೇತಿ ನೀಡಲಿದ್ದಾರೆ.

ಸ್ವಾವಲಂಬಿ ಬದುಕು ಹಾಗೂ ಶೈಕ್ಷಣಿಕವಾಗಿ ಗಟ್ಟಿಕೊಂಡಾಗ ಬದುಕು ಸುಂದರವಾಗುತ್ತದೆ ಎಂಬ ಸದುದ್ದೇಶವನ್ನು ಇಟ್ಟುಕೊಂಡು, ಬ್ರಹ್ಮಶ್ರೀ ನಾರಾಯಾಣ ಗುರುಗಳ ತತ್ವ ಸಿದ್ದಾಂತ ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂಬ ಮಾತಿನಂತೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಸುಮಾರು ನಾಲ್ಕೂವರೆ ದಶಕಗಳಿಂದ ಸಂಘದ ದತ್ತಿನಿಧಿಯಿಂದ ಉಚಿತ ಪುಸ್ತಕ ವಿತರಣೆಯನ್ನು ಮಾಡುತ್ತ ಬರುತ್ತಿರುವುದು ಸಮಾಜಕ್ಕೆ ಪ್ರೇರಣೆಯಾಗಿದೆ ಎಂದು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ತಿಳಿಸಿದ್ದಾರೆ.

Related posts

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya
error: Content is protected !!