September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಬ್ರೆಂಟ್ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಕಾರ್ಯಾಗಾರ

ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ ಕುರಿತು ಕಾನೂನಿನ ಅರಿವು ಹಾಗೂ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಇತ್ತೀಚೆಗೆ ಮೂಡುಬಿದಿರೆಯ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾನೂನು ಸಲಹೆಗಾರರಾದ ಲಕ್ಷ್ಮೀಶ್ ರೈ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗಾಗಿ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ POCSO ಕಾಯಿದೆ, ಸಿಬ್ಬಂದಿಗಳ ರಕ್ಷಣೆಗಾಗಿ ಜಾರಿಯಲ್ಲಿರುವ POSH ಕಾಯಿದೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಹಾಗೂ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಾಗೃತಿ ಕಾರ್ಯಾಗಾರ ಮತ್ತು ಮಾದಕ ವಸ್ತುಗಳ ವಿರುದ್ಧ ಜಾರಿಯಲ್ಲಿರುವ ವಿಶೇಷ ಕಾನೂನು ಕ್ರಮಗಳ ಕುರಿತು ಅರಿವು ಮೂಡಿಸಲಾಯಿತು. ಅಲ್ಲದೆ, ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜನ್ನು ToFEI ಮಾರ್ಗಸೂಚಿಗಳ ಅನ್ವಯ ‘ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ’ ಎಂದು ಘೋಷಿಸಲಾಯಿತು.

ಸಂಸ್ಥೆಯ ಆಡಳಿತಾಧಿಕಾರಿಗಳಾದ ಅರುಣ್ ಡಿಸಿಲ್ವಾರವರು ಮಾತನಾಡಿ ಪಿಯುಸಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯಿದೆಯು ಲೈಂಗಿಕ ದೌರ್ಜನ್ಯದ ವಿರುದ್ಧ ಹೇಗೆ ರಕ್ಷಣೆ ನೀಡುತ್ತದೆ ಎಂಬುದರ ಬಗ್ಗೆ ತಿಳಿಹೇಳಿದರು. ಹಾಗೆಯೇ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಸ್ತು ಪಾಲನೆಯ ಮಹತ್ವದ ಬಗ್ಗೆ ವಿವರಣೆ ನೀಡಿದರು.

ಕಾಲೇಜಿನ ಮಕ್ಕಳ ಹಕ್ಕುಗಳ ರಕ್ಷಣಾಧಿಕಾರಿಯಾದ ವಿಕಾಸ್ ಹೆಬ್ಬಾರ್ ರವರು ಮಾತನಾಡುತ್ತಾ ಕರ್ನಾಟಕ ಮಕ್ಕಳ ಹಕ್ಕುಗಳ ಆಯೋಗದ ಮಾರ್ಗಸೂಚಿಗಳ ಪ್ರಕಾರ ಕಾಲೇಜಿನಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಕಲ್ಪಿಸಲಾದ ಮಕ್ಕಳ ರಕ್ಷಣಾ ನೀತಿ ಮತ್ತು ವ್ಯವಸ್ಥೆಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು. ಹಾಗೆಯೇ ವಿದ್ಯಾರ್ಥಿಗಳು ತಮ್ಮ ಹಕ್ಕುಗಳ ರಕ್ಷಣೆಗಾಗಿ ಸಲಹಾ ಪೆಟ್ಟಿಗೆಯ ಸದುಪಯೋಗವನ್ನು ಪಡೆಯುವುದು ಹೇಗೆ ಎಂಬುದರ ಬಗ್ಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಟ್ರಸ್ಟಿ ಹಾಗೂ ಪ್ರಾಂಶುಪಾಲರಾದ ಡಾ. ಎಸ್. ಎನ್. ವೆಂಕಟೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಟ್ರಸ್ಟಿಗಳಾದ ಡಾ. ಶರತ್ ಗೋರೆ, ಯೋಗೇಶ್ ಬೆಡೇಕರ್, ಚಂದ್ರಶೇಖರ ರಾಜೇ ಅರಸ್, ಮೆಹಬೂಬ್ ಬಾಷಾ ಹಾಗೂ ಸುಭಾಷ್ ಝಾ ಅವರು ಉಪಸ್ಥಿತರಿದ್ದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ಹರೀಶ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿದರು. ವರ್ಷಾ ಕಾಮತ್ ಸ್ವಾಗತಿಸಿದರು. ಸತೀಶ್ ಬಂಗೇರ ವಂದಿಸಿದರು.

Related posts

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!