September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

ಬೆಳ್ತಂಗಡಿ: ರೋಟರಿ ಕ್ಲಬ್, ಭಾರತೀಯ ದಂತ ವೈದ್ಯ ಸಂಘ ಮತ್ತು ಆಯುಷ್ ಫೆಡರೇಶನ್ ಆಫ್ ಇಂಡಿಯಾದ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ 18ನೇ ವರ್ಷದ ಶಾಲಾ ಶೈಕ್ಷಣಿಕ ಪರಿಕರಗಳ ವಿತರಣಾ ಸಮಾರಂಭವು ಜೂ. 17ರಂದು ಸೂಳಬೆಟ್ಟು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಅತಿಥಿಗಳಾಗಿದ್ದ ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀಧರ ಕೆ.ವಿ., ಕಾರ್ಯದರ್ಶಿ ಡಾ. ರಾಘವೇಂದ್ರ ಪಿದಮಲೆ ಮತ್ತು ಡಾ. ಮುಕ್ತಾ ಪಟವರ್ಧನ್ ಅವರು ಶಾಲಾ ಹಾಗೂ ಅಂಗನವಾಡಿ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಿದರು. ದಾನಿಗಳಾದ ಡಾ. ಶಶಿಧರ ಡೋಂಗ್ರೆ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ಸುಷ್ಮಾ ಡೋಂಗ್ರೆ, ಡಾ. ಮನೀಷ್ ಡೋಂಗ್ರೆ ಮತ್ತು ಬಳಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ ಅವರು ಉಪಸ್ಥಿತರಿದ್ದರು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರವೀಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳಿಗೆ ಬರೆಯುವ ಪುಸ್ತಕ, ಸಮವಸ್ತ್ರ, ಬ್ಯಾಗ್, ಕೊಡೆ, ಪೆನ್ನು, ಪೆನ್ಸಿಲ್, ಪೇಸ್ಟ್ ಮತ್ತಿತರ ಪರಿಕರಗಳನ್ನು ವಿತರಿಸಲಾಯಿತು.

ಇದೇ ವೇಳೆ, ಜೆ.ಇ.ಇ. ಮೈನ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸೂಳಬೆಟ್ಟಿನ ಪ್ರಥಮ ಗೋಖಲೆ ಮತ್ತು ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅಳದಂಗಡಿಯ ಸಾಕ್ಷಿ ಅವರನ್ನು ಅಭಿನಂದಿಸಿ, ಡೋಂಗ್ರೆ ಕುಟುಂಬಸ್ಥರು ಆರ್ಥಿಕ ಸಹಾಯ ನೀಡಿ ಪ್ರೋತ್ಸಾಹಿಸಿದರು.

ಶಿಕ್ಷಕಿ ರೀಟಾ ರೋಡ್ರಿಗಸ್, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ, ಅಕ್ಷರ ದಾಸೋಹದ ಲವಿನಾ ಮತ್ತು ಚಿತ್ರಾಕ್ಷಿ ಅವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ ಮೊರಾಸ್ ಸ್ವಾಗತಿಸಿ, ವಂದಿಸಿದರು.

Related posts

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ರವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya
error: Content is protected !!