September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ತರಬೇತಿ ಪಡೆಯುವುದೇ ಸೌಭಾಗ್ಯ. ಬ್ಯೂಟೀಪಾರ್ಲರ್ ವೃತ್ತಿಯಲ್ಲಿ ಪ್ರತಿಯೊಬ್ಬರೂ ತನ್ನದೇ ಆದ ಸೃಜನಶೀಲತೆಯನ್ನು ಅಳವಡಿಸಿಕೊಂಡರೆ ಬೆಳವಣಿಗೆ ಹೊಂದಲು ಅನುಕೂಲಕರವಾಗುತ್ತದೆ. ಸಮಯಪಾಲನೆ, ಶಿಸ್ತು ಜೊತೆಗೆ ಇರಲಿ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ‌ ಮಾಧ್ಯಮ ( ಕೇಂದ್ರೀಯ ಪಠ್ಯ), ಉಜಿರೆ ಇದರ ಮುಖ್ಯೋಪಾಧ್ಯಾಯ ಮನಮೋಹನ್ ನಾಯಕ್ ಅಭಿಪ್ರಾಯಪಟ್ಟರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ 35 ದಿನಗಳ ಕಾಲ ವಸತಿಯುತ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ: ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತರಿಸಿ, ಮಾತನಾಡಿದವರು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಸುನೀಲ್ ನಾಯ್ಕೆ ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು, ಹಣಕಾಸಿನ ಜ್ಞಾನ ಮತ್ತು ಡಿಜಿಟಲ್ ವ್ಯವಹಾರಗಳ ಅರಿವು ಇಂದಿನ ಕಾಲದಲ್ಲಿ ಅತ್ಯಗತ್ಯವಾಗಿದ್ದು, ಈ ತರಬೇತಿ ನಿಮ್ಮಗೆಲ್ಲರಿಗೂ ಶುಭವಾಗಲಿ ಎಂದರು.

ಕಾರ್ಯಕ್ರಮದಲ್ಲಿ ಮಾದವಿ.‌ಎಂ. ರೈ ಅತಿಥಿ ಉಪನ್ಯಾಸಕರು, ಉಪಸ್ಥಿತರಿದ್ದರು.
ನಂತರ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಅವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.
ಸಂಸ್ಥೆಯ ಹಿರಿಯ ಉಪನ್ಯಾಸಕ ಕರುಣಾಕರ್ ಕೆ. ಜೈನ್: ಅವರು ಧನ್ಯವಾದ ಸಮರ್ಪಿಸಿದರು.
ಜಲಜಾಕ್ಷಿ ಮತ್ತು ಬಳಗ ಪ್ರಾರ್ಥನೆ ಮಾಡಿದರು. ಜಯಲಕ್ಷೀ , ಶೈಲಜಾ ತರಬೇತಿ ಅನುಭವ ಹಂಚಿಕೊಂಡರು.

Related posts

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಎಸ್‌.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯ : ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Suddi Udaya
error: Content is protected !!