August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಗಸ್ಟೀನ್ ಟಿ.ಎ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ. ಸ್ವಾಗತಿಸಿದರು. ಕಾರ್ಯದರ್ಶಿ ಶಿಜೋ ಜೋಸೆಫ್ ಅವರು 2025–26ನೇ ಸಾಲಿನ ವಾರ್ಷಿಕ ವರದಿಯನ್ನು ಹಾಗೂ ಕೋಶಾಧಿಕಾರಿ ರಂಜಿತ್ ಪಿ.ಎಸ್. ಅವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಸದಸ್ಯರು ವರದಿ ಮತ್ತು ಲೆಕ್ಕಪತ್ರವನ್ನು ಸರ್ವಾನುಮತದಿಂದ ಅಂಗೀಕರಿಸಿದರು.

ಕಳೆದ ಸಾಲಿನಲ್ಲಿ ಸಂಘವು ಕಾರುಣ್ಯ ಸ್ಪರ್ಶಂ ಯೋಜನೆಯಡಿ ಆರ್ಥಿಕ ನೆರವು, ಸಿಆರ್ ಪಿ ತರಬೇತಿ, ರಕ್ತದಾನ ಶಿಬಿರಗಳಲ್ಲಿ ಭಾಗವಹಿಸುವಿಕೆ ಸೇರಿದಂತೆ ವಿವಿಧ ಸಾಮಾಜಿಕ ಹಾಗೂ ಮಾನವೀಯ ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದು ವರದಿಯಲ್ಲಿ ತಿಳಿಸಲಾಯಿತು. ದಿವಂಗತ ಡಾ. ಟಿ.ವಿ. ಜೋಸೆಫ್ ಅವರ ಸ್ಮರಣಾರ್ಥ ಸಂಗ್ರಹಿಸಲಾದ ರೂ. 5,45,971 ಮೊತ್ತವನ್ನು ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಲಿಜೋ ಆಂಟನಿ ಎಂಬ ಮಗುವಿನ ಚಿಕಿತ್ಸೆಗೆ ಹಸ್ತಾಂತರಿಸಿರುವುದನ್ನು ಸಭೆಯಲ್ಲಿ ವಿಶೇಷವಾಗಿ ಪ್ರಶಂಸಿಸಲಾಯಿತು.

ಸಭೆಯಲ್ಲಿ ಸದಸ್ಯತ್ವ, ಕಾರುಣ್ಯ ಸ್ಪರ್ಶಂ ಯೋಜನೆ, ಮಾಸಿಕ ಸಭೆಗಳು ಹಾಗೂ ಸಂಘದ ನಿಧಿ ವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಅಧ್ಯಕ್ಷ ಅಗಸ್ಟೀನ್ ಟಿ.ಎ., ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ. ಹಾಗೂ ಗೌರವ ಸಲಹೆಗಾರರಾದ ಜೋಸೆಫ್ ಕೆ.ಡಿ. ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.

Related posts

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

Suddi Udaya
error: Content is protected !!