28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪುತ್ತೂರು

ಸುರತ್ಕಲ್: ಶ್ರೀನಿವಾಸ ಆಸ್ಪತ್ರೆಯಲ್ಲಿ ಪತ್ರಕರ್ತರಿಗೆ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

ಸುರತ್ಕಲ್: ‘ಸಮಾಜಕ್ಕಾಗಿ ದುಡಿಯುವವರ ಆರೈಕೆ’ ಎಂಬ ಧ್ಯೇಯದೊಂದಿಗೆ ಮುಕ್ಕದ ಶ್ರೀನಿವಾಸ ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರಿಗಾಗಿ ಆಯೋಜಿಸಿದ್ದ ಒಂದು ವಾರದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಶನಿವಾರ ಚಾಲನೆ ನೀಡಲಾಯಿತು.


ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಡೇವಿಡ್ ರೊಸಾರಿಯೊ ಅವರು ಮಾತನಾಡಿ, “ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಕರ್ತರ ಆರೋಗ್ಯ ಕಾಪಾಡುವುದು ನಮ್ಮ ಸಾಮಾಜಿಕ ಜವಾಬ್ದಾರಿ. ಅವರ ಸಂಘದ ಜೊತೆ ಸೇವಾ ಕಾರ್ಯ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ನಮಗೆ ಅತೀವ ಸಂತಸವಿದೆ. ಮುಂದೆಯೂ ಪತ್ರಕರ್ತರ ಆರೋಗ್ಯದ ವಿಷಯದಲ್ಲಿ ಅವರಿಗೊಂದು ವಿಶೇಷ ಆರೋಗ್ಯ ಕಾರ್ಡ್ ಒದಗಿಸಿ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಸಿದ್ಧರಿದ್ದೇವೆ,” ಎಂದು ಭರವಸೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಮಾತನಾಡಿ, “ಪತ್ರಕರ್ತರು, ಛಾಯಾಗ್ರಾಹಕರು, ಟಿವಿ ಮಾಧ್ಯಮದ ಕ್ಯಾಮೆರಾಮನ್‌ಗಳು ಸೇರಿದಂತೆ ಬಹುತೇಕರು ಸಮಯ-ಸಂದರ್ಭ ನೋಡದೆ, ಹಗಲು-ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಸುದ್ದಿಯ ಬೆನ್ನುಹತ್ತಿ ಓಡುವ ಈ ನಿತ್ಯ ಜಂಜಾಟದಲ್ಲಿ ನಾವು ನಮ್ಮ ಆರೋಗ್ಯವನ್ನೇ ಮರೆತುಬಿಡುತ್ತೇವೆ. ಇದು ನಮ್ಮ ಕುಟುಂಬಕ್ಕೂ ಮಾಡುವ ಅನ್ಯಾಯ. ಇದನ್ನು ಮನಗಂಡು ಮುಕ್ಕ ಶ್ರೀನಿವಾಸ ಆಸ್ಪತ್ರೆಯ ಸಹಯೋಗದಲ್ಲಿ ಈ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದೇವೆ. ಇಂದಿನಿಂದ ಜೂನ್ 27ರವರೆಗೆ ನಡೆಯುವ ಈ ಶಿಬಿರದ ಸದುಪಯೋಗವನ್ನು ಜಿಲ್ಲೆಯ ಎಲ್ಲಾ ಪತ್ರಕರ್ತ ಬಂಧುಗಳು ಪಡೆದುಕೊಳ್ಳಬೇಕು,” ಎಂದು ಕರೆ ನೀಡಿದರು.

“ಪತ್ರಕರ್ತರ ಒಳಿತಿಗಾಗಿ ನಮ್ಮ ಮನವಿಗೆ ತಕ್ಷಣ ಸ್ಪಂದಿಸಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿದ ಶ್ರೀನಿವಾಸ ಆಸ್ಪತ್ರೆಯ ಕುಲಪತಿ ಡಾ. ಎ. ಶ್ರೀನಿವಾಸ ರಾವ್ ಅವರಿಗೆ ಸಂಘದ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು. ಜೊತೆಗೆ ಆಸ್ಪತ್ರೆಯ ಆಡಳಿತ ಮಂಡಳಿ ಹಾಗೂ ವೈದ್ಯ ವೃಂದದವರ ಸೇವಾ ಮನೋಭಾವದ ಬೆಂಬಲಕ್ಕೆ ಧನ್ಯವಾದಗಳು,” ಎಂದು ಅವರು ನುಡಿದರು.
ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ಮಾತನಾಡಿ, “ಎ. ಶ್ಯಾಮ ರಾವ್ ಫೌಂಡೇಶನ್ ಸೇವಾ ಮನೋಭಾವದಿಂದ ಬಹಳಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ಅದನ್ನು ಯಾರೂ ಮರೆಯುವಂತಿಲ್ಲ. ಇದೀಗ ಪತ್ರಕರ್ತರ ಸಂಘದೊಂದಿಗೆ ಶ್ರೀನಿವಾಸ ಆಸ್ಪತ್ರೆ ಕೈಜೋಡಿಸಿ ನಮ್ಮ ಸದಸ್ಯರ ಮತ್ತು ಅವರ ಕುಟುಂಬದ ಉಚಿತ ಆರೋಗ್ಯ ತಪಾಸಣೆಗೆ ಎಲ್ಲಾ ರೀತಿಯ ಸಹಕಾರ ನೀಡಿರುವುದು ನಿಜಕ್ಕೂ ಶ್ಲಾಘನೀಯ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಸಚಿವ ಡಾ. ಕೆ. ಸತ್ಯನಾರಾಯಣ ರೆಡ್ಡಿ, ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನಿಲ್ ಕುಮಾರ್, ಶ್ರೀನಿವಾಸ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ. ಉದಯ್ ಕುಮಾರ್ ರಾವ್, ಮೂಲ್ಕಿ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಸುರತ್ಕಲ್,ಸೇರಿದಂತೆ ಆಸ್ಪತ್ರೆಯ ಹಿರಿಯ ವೈದ್ಯರು, ಆಡಳಿತ ವರ್ಗದವರು ಉಪಸ್ಥಿತರಿದ್ದರು.ಝರೀನಾ ಕಾರ್ಯ ಕ್ರಮ ನಿರೂಪಿಸಿದರು.

Related posts

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

Suddi Udaya

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya

ಗುರುವಾಯನಕೆರೆ: ಶ್ರೀ ಶಾರದಾಂಭ ಭಜನಾ ಮಂಡಳಿ: ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!