32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

ಉಜಿರೆ: ಉಜಿರೆಯ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಕ್ಷಿತಿಜ್ ಎಸ್. ಶೆಟ್ಟಿ ಅವರು ರೋಟರಿ ಇಂಟರ್‌ನ್ಯಾಷನಲ್ ಜಿಲ್ಲಾ 3181ರ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿ (District Interact Representative – DIR) ಆಗಿ 2026-27ನೇ ಸಾಲಿಗೆ ಆಯ್ಕೆಯಾಗಿರುವುದು ಶಾಲೆಗೆ ಹಾಗೂ ಸಮಗ್ರ ಎಸ್.ಡಿ.ಎಮ್ ಕುಟುಂಬಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಕ್ಷಿತಿಜ್ ಅವರು ತಮ್ಮ ಅತ್ಯುತ್ತಮ ನಾಯಕತ್ವ ಗುಣಗಳು, ಸೇವಾ ಮನೋಭಾವ, ಆತ್ಮವಿಶ್ವಾಸ ಮತ್ತು ಸಮರ್ಪಣೆಯ ಮೂಲಕ ಈ ಗೌರವಾನ್ವಿತ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಅವರು ಜಿಲ್ಲಾ ಮಟ್ಟದಲ್ಲಿ ವಿವಿಧ ಇಂಟರಾಕ್ಟ್ ಕ್ಲಬ್‌ಗಳ ಚಟುವಟಿಕೆಗಳಿಗೆ ನೇತೃತ್ವ ವಹಿಸಿ ಯುವಜನರಲ್ಲಿ ಸೇವಾ ಮನೋಭಾವ ಮತ್ತು ನಾಯಕತ್ವ ಕೌಶಲ್ಯಗಳನ್ನು ಬೆಳೆಸುವ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು ಮನಮೋಹನ್ ನಾಯಕ್ ಕೆ.ಜಿ ಅಭಿನಂದನೆ ಸಲ್ಲಿಸಿ, “ಕ್ಷಿತಿಜ್ ಅವರ ಈ ಸಾಧನೆ ಅವರ ನಾಯಕತ್ವ ಸಾಮರ್ಥ್ಯ ಪ್ರತಿಬಿಂಬಿಸುತ್ತದೆ. ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಗಳಿಸಿ ಯುವ ಸಮುದಾಯಕ್ಕೆ ಮಾದರಿಯಾಗಲಿ” ಎಂದು ಹಾರೈಸಿದರು.

ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕ್ಷಿತಿಜ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಅವರ ಮುಂದಿನ ಎಲ್ಲ ಪ್ರಯತ್ನಗಳಿಗೂ ಶುಭ ಹಾರೈಸಿದ್ದಾರೆ.

Related posts

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ತಹಶೀಲ್ದಾರ್ ಆದೇಶದ ಬೆನ್ನಲ್ಲೇ ಅನಧಿಕೃತ ಕಟ್ಟಡ ತೆರವು

Suddi Udaya
error: Content is protected !!