28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ ) ನಿಂದ ನಡೆಸಲ್ಪಡುವ ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದಲ್ಲಿ “ಯೋಗ ಮಾಡಿ ಆರೋಗ್ಯ ಕಾಪಾಡಿ” ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಯೋಗ ದಿನಾಚರಣೆಯನ್ನು ಜೂ. 20ರಂದು ಆಚರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ. ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯ ಕ್ರಮವನ್ನು ಉದ್ಘಾಟಿಸಿದರು.

ಸಹ ಶಿಕ್ಷಕಿಯಾದ ಕುಮಾರಿ ರೇಷ್ಮಾ ಕಾರ್ಯಕ್ರಮದ ನಿರೂಪಣೆಯನ್ನು ನಡೆಸಿಕೊಟ್ಟು, ಯೋಗದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ಮುಖ್ಯೋಪಾಧ್ಯಾಯಿನಿ ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿ, ಯೋಗದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಯೋಗದ ಮಹತ್ವ ಹಾಗೂ ಆರೋಗ್ಯಕರ ಜೀವನದಲ್ಲಿ ಅದರ ಪಾತ್ರದ ಕುರಿತು ತಿಳಿ ಹೇಳಿದರು.

ಅನಂತರ ದೈಹಿಕ ಶಿಕ್ಷಣ ಶಿಕ್ಷಕಿ ಹರೀಣಾಕ್ಷಿಯವರು ವಿದ್ಯಾರ್ಥಿಗಳಿಗೆ ಯೋಗದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು ಮತ್ತು ತರಗತಿವಾರು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಯೋಗ ಆಸನಗಳನ್ನು ಮಾಡಿಸಿದರು . ಯೋಗವನ್ನು ನಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕೆಂದು ಪ್ರತಿಜ್ಞೆ ಸ್ವೀಕರಿಸಲಾಯಿತು . ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ. ಭಗವಾನ್ ಬಿ.ಸಿ ಭೇಟಿ

Suddi Udaya
error: Content is protected !!