28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ತರಬೇತಿ

ನಿಡ್ಲೆ; ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ ಮತ್ತು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ನಡೆಯುವ 2026-27 ನೇ ಸಾಲಿನ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ತರಬೇತಿ ಕಾರ್ಯಕ್ರಮವು ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮವನ್ನು ಹಿರಿಯ ಯಕ್ಷಗಾನ ಕಲಾವಿದರಾದ ನಿಡ್ಲೆ ಗೋವಿಂದ ಭಟ್ ಉದ್ಘಾಟಿಸಿ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪಟ್ಲ ಫೌಂಡೇಶನ್ ವತಿಯಿಂದ ಶಾಲೆಗಳಲ್ಲಿ ನಾಟ್ಯ ತರಬೇತಿ ನಡೆಯುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು. ಫೌಂಡೇಶನ್ ನ ಕೇಂದ್ರ ಸಮಿತಿಯ ಟ್ರಸ್ಟಿ , ಸಂಘಟಕ ಭುಜಬಲಿ ಬಿ. ಧರ್ಮಸ್ಥಳ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಉತ್ತಮ ಕಲಾವಿದರಾದ ಈಶ್ವರ ಪ್ರಸಾದ್ ಅವರು ಗುರುಗಳಾಗಿ ಸಿಗುತ್ತಿರುವುದು ನಿಮ್ಮ ಭಾಗ್ಯ. ವಿದ್ಯಾಭ್ಯಾಸದ ಜೊತೆಗೆ ಯಕ್ಷಗಾನವನ್ನು ಕಲಿಯಿರಿ ಇದು ನಿಮ್ಮ ಭವಿಷ್ಯಕ್ಕೆ ಪೂರಕ ಎಂದು ಕಿವಿ ಮಾತು ಹೇಳಿದರು. ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಾರ್ಯ ಚಟುವಟಿಕೆಗಳನ್ನು ತಿಳಿಸಿದರು.

ಪಟ್ಲ ಸತೀಶ್ ಶೆಟ್ಟಿ ಇವರ ಕಾರ್ಯವೈಖರಿಯನ್ನು ಪ್ರಶಂಶಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಟ್ರಸ್ಟ್ ನ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಅವರು ಕಳೆದ ನಾಲ್ಕು ವರ್ಷಗಳಿಂದ ವಿವಿಧ ಶಾಲೆಗಳಲ್ಲಿ ನಡೆಯುತ್ತಿರುವ ಯಕ್ಷನಾಟ್ಯ ಅಭಿಯಾನ ಕಾರ್ಯಕ್ರಮದ ಬಗ್ಗೆ ತಿಳಿಸುತ್ತಾ ಪ್ರಸ್ತುತ ಸಾಲಿನಲ್ಲಿ ನಡೆಯುವ ನಾಟ್ಯ ಅಭಿಯಾನ ಕಾರ್ಯಕ್ರಮದ ಬಗ್ಗೆ ಮತ್ತು ಪಟ್ಲ ಫೌಂಡೇಶನ್ ಟ್ರಸ್ಟ್ ಕಾರ್ಯ ಚಟುವಟಿಕೆಗಳನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಬೆಳ್ತಂಗಡಿ ಘಟಕದ ಕಾರ್ಯದರ್ಶಿ ಹಾಗೂ ಹಿರಿಯ ಚೆಂಡೆ ಮೃದಂಗ ವಾದಕ ಶಿತಿಕಂಠ ಭಟ್ ಅವರು ಯಕ್ಷಗಾನದಿಂದ ಪುರಾಣ ಕಥೆಗಳ ಅರಿವು ಮೂಡುತ್ತದೆ ಇದು ನಿಮ್ಮ ಶಿಕ್ಷಣಕ್ಕೂ ಅನುಕೂಲ ಎಂದು ನುಡಿದು ಶುಭ ಕೋರಿದರು. ಯಕ್ಷ ನಾಟ್ಯ ಗುರುಗಳಾದ ಈಶ್ವರ ಪ್ರಸಾದ್ ಪಿ.ವಿ ಇವರು ಯಕ್ಷಗಾನ ಕಲಿಕೆಯ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕಲಿತ ವಿಷಯಗಳನ್ನು ಅಭ್ಯಾಸ ಮಾಡುತ್ತಾ ಮುಂದುವರೆದರೆ ಭವಿಷ್ಯವಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಗೌಡ ವಹಿಸಿದ್ದರು. ಶಿಕ್ಷಕಿ ಶೋಲಿ ನಿರೂಪಿಸಿ, ಸುಚಿತ್ರ ಸ್ವಾಗತಿಸಿ, ಪ್ರಭಾರ ಮುಖ್ಯ ಶಿಕ್ಷಕ ಶರತ್ ಕುಮಾರ್ ತುಳುಪುಳೆ ವಂದಿಸಿದರು. ಕಾರ್ಯಕ್ರಮದಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭ

Suddi Udaya
error: Content is protected !!