32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜೀವನದ ಗುರಿ ನಿರ್ಧಾರ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರವನ್ನು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಾಗಿಸಿದ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಹರೀಶ್ ನಂಬಿಯಾರ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಹೊಂದಿ, ಅದನ್ನು ಸಾಧಿಸಲು ಸಮರ್ಪಣೆ ಹಾಗೂ ಸೂಕ್ತ ಯೋಜನೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಮತ್ತೋರ್ವ ಉಪನ್ಯಾಸಕ ವರ್ಷಾ ಕಾಮತ್ ಅವರು ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಲಭ್ಯವಿರುವ ವಿವಿಧ ಶೈಕ್ಷಣಿಕ ಹಾಗೂ ವೃತ್ತಿ ಅವಕಾಶಗಳ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳಲ್ಲಿ ಅನುಭವಾತ್ಮಕ ಕಲಿಕೆಯನ್ನು ಉತ್ತೇಜಿಸಲು ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಗುರಿಮುಖಿ ಚಿಂತನೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿದ್ದ ಕಾಲೇಜಿನ ಟ್ರಸ್ಟಿ ಹಾಗೂ ಪ್ರಾಂಶುಪಾಲರಾದ ಡಾ. ಎಸ್. ಎನ್. ವೆಂಕಟೇಶ್ ನಾಯಕ್ ಮಾತನಾಡಿ ವಿದ್ಯಾರ್ಥಿಗಳ ಜೀವನ ಹಾಗೂ ವೃತ್ತಿ ಕೌಶಲ್ಯಗಳನ್ನು ವೃದ್ಧಿಸುವ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ವೈಬ್ರೆಂಟ್ ಕಾಲೇಜಿನ ಟ್ರಸ್ಟಿಗಳಾದ ಸುಭಾಷ್ ಝಾ, ಡಾ. ಶರತ್ ಗೋರೆ, ಮೆಹಬೂಬ್ ಬಾಷಾ, ಚಂದ್ರಶೇಖರ್ ರಾಜೇ ಅರಸ್ ಹಾಗೂ ಯೋಗೇಶ್ ಬೆಡೆಕರ್ ಉಪಸ್ಥಿತರಿದ್ದರು.

Related posts

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya
error: Content is protected !!