28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇದರ ಮತದಾರರ ಸಾಕ್ಷರತಾ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇದರ ಸಹಯೋಗದಲ್ಲಿ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಸಂಸತ್ತು ಇದರ ಉದ್ಘಾಟನಾ ಸಮಾರಂಭ ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ ) ವೇಣೂರು ಇದರ ಉಪ ಪ್ರಾಂಶುಪಾಲರಾದ ವೆಂಕಟೇಶ್ ಎಸ್ ತುಳುಪುಳೆ ವಹಿಸಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಪ್ರಾಂಶುಪಾಲರಾದ ಹಾಗೂ ವೇಣೂರು ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಯಾದ ಸುಕುಮಾರ್ ಜೈನ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗುರುಪ್ರಸಾದ್ ಉದ್ಯಮಿಗಳು ಮತ್ತು ಗುತ್ತಿಗೆದಾರರು ನಾರಾವಿ ಹಾಗೂ ರಾಜೇಶ್ ಪೂಜಾರಿ ಮೂಡುಕೋಡಿ ಕಾರ್ಯಾಧ್ಯಕ್ಷರು ಎಸ್ ಡಿ ಎಂ ಸಿ ಪ್ರೌಢಶಾಲೆ ವೇಣೂರು ವಹಿಸಿದ್ದರು. ಎನ್ ಸಿ ಸಿ ಇದರ ಕಾರ್ಯಕ್ರಮದ ಅಧಿಕಾರಿಗಳಾದ ರವೀಂದ್ರ ಕೆ ಹಾಗೂ ಶಾಲಾ ನಾಯಕ ಎನ್ ನರಸಿಂಹ ಕಾಮತ್ ಮತ್ತು ಉಪನಾಯಕಿ ಬ್ರಾಹ್ಮಿ ವೇದಿಕೆಯಲ್ಲಿದ್ದರು.

ಶಿಕ್ಷಕ ರವೀಂದ್ರ ಕೆ ಸ್ವಾಗತಿಸಿ, ಪ್ರೇಮ ಕೆ ವಂದಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಸುಶೀಲಾ .ಜಿ ನಿರ್ವಹಿಸಿದರು.

Related posts

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya
error: Content is protected !!